image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಾಂಬ್ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ: ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ

ಬಾಂಬ್ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ: ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ

​ಮಂಗಳೂರು: ಇನ್ಸ್ಟಾಗ್ರಾಮ್ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಪ್ರಚೋದನಕಾರಿ ಕಾಮೆಂಟ್ ಮಾಡಿ, ಬಾಂಬ್ ಸ್ಫೋಟದ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮಂಗಳೂರು ನಗರದ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ದಿನಾಂಕ 02-03-2026 ರಂದು ಇನ್ಸ್ಟಾಗ್ರಾಮ್‌ನಲ್ಲಿ "Support madi bro Ullal masjid hathira bomb blast madthini" (ಸಪೋರ್ಟ್ ಮಾಡಿ ಬ್ರೋ, ಉಳ್ಳಾಲ ಮಸೀದಿ ಹತ್ತಿರ ಬಾಂಬ್ ಬ್ಲಾಸ್ಟ್ ಮಾಡ್ತೀನಿ) ಎಂದು ವ್ಯಕ್ತಿಯೊಬ್ಬ ಕಾಮೆಂಟ್ ಮಾಡಿದ್ದನು. ಧರ್ಮಗಳ ಮಧ್ಯೆ ದ್ವೇಷ ಹಾಗೂ ವೈಮನಸ್ಸು ಉಂಟುಮಾಡಿ ಹಿಂಸೆಗೆ ಪ್ರಚೋದನೆ ನೀಡುವ ಉದ್ದೇಶದಿಂದ ಈ ಕಮೆಂಟ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
​ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು, ದಿನಾಂಕ 03-03-2026 ರಂದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
​ಬಂಧಿತ ಅರೋಪಿ ಶಂಕರ್ ಮಸ್ತಪ್ಪ ಮೊಗೇರ್ (35 ವರ್ಷ).ದೇವಿನಗರ, ಜಾಲಿ, ಭಟ್ಕಳ, ಉತ್ತರ ಕನ್ನಡ ಜಿಲ್ಲೆ. ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 41/2026 ರಂತೆ, ಭಾರತೀಯ ನ್ಯಾಯ ಸಂಹಿತೆ (BNS) 2023 ರ ಸೆಕ್ಷನ್ 196(2), 197(2), 299, ಮತ್ತು 353(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಮಂಗಳೂರು ನಗರದ ಮಾನ್ಯ 7ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
​ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಇಂತಹ ಪ್ರಚೋದನಕಾರಿ ಸಂದೇಶಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.

Category
ಕರಾವಳಿ ತರಂಗಿಣಿ