ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಕಾವೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಕೃತ್ಯ ನಡೆದ ಕೇವಲ 24 ಗಂಟೆಗಳ ಒಳಗೆ ಆರೋಪಿಯನ್ನು ಬಂಧಿಸಿ, ಕಳವು ಮಾಡಲಾಗಿದ್ದ ಎಲ್ಲಾ ನಗನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ.
ದಿನಾಂಕ 07-03-2026 ರಂದು ಮಧ್ಯಾಹ್ನ 12:00 ಗಂಟೆಯ ಸುಮಾರಿಗೆ ಉಲ್ಲಾಸ್ ನಗರದ ಮನೆಯೊಂದರಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿ, ಮನೆಯ ಬಾಗಿಲಿನ ಬೀಗ ಮುರಿದು ಕಳ್ಳರು ಒಳ ನುಗ್ಗಿದ್ದರು. ಮನೆಯಲ್ಲಿದ್ದ ಸುಮಾರು 4,80,000 ರೂ. ಮೌಲ್ಯದ 39 ಗ್ರಾಂ ಚಿನ್ನಾಭರಣ ಹಾಗೂ 182 ಗ್ರಾಂ ಬೆಳ್ಳಿಯ ಆಭರಣಗಳನ್ನು ದೋಚಲಾಗಿತ್ತು. ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ತಕ್ಷಣವೇ ಕಾರ್ಯಪ್ರವೃತ್ತರಾದ ಕಾವೂರು ಪೊಲೀಸರು ವಿಶೇಷ ಪತ್ತೆ ತಂಡವನ್ನು ರಚಿಸಿದ್ದರು. ಈ ತಂಡವು ದಿನಾಂಕ 08-03-2026 ರಂದು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.
ಬಂಧಿತ ಆರೋಪಿ ಅಶೋಕ್ (41), ತಂದೆ: ದೊಂಬಯ್ಯ ಪೂಜಾರಿ, ವಾಸ: ದೇರಾಜೆ ಮನೆ, ಸಜೀಪನಡು, ಬಂಟ್ವಾಳ. ಕಳುವಾಗಿದ್ದ ಎಲ್ಲಾ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳಲಾಗಿದ್ದು,
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ನಡೆದ ಈ ಯಶಸ್ವಿ ಕಾರ್ಯಾಚರಣೆಯಲ್ಲಿ
ಶ್ರೀ ರಾಘವೇಂದ್ರ ಎಂ. ಬೈಂದೂರು (ಪೊಲೀಸ್ ನಿರೀಕ್ಷಕರು)ಶ್ರೀ ಮಲ್ಲಿಕಾರ್ಜುನ ಬಿರಾದಾರ (ಪೊಲೀಸ್ ಉಪ-ನಿರೀಕ್ಷಕರು)
ಹಾಗೂ ಸಿಬ್ಬಂದಿಗಳಾದ ದಿನೇಶ್, ಮಾಲತೇಶ್, ನಾಗರಾಜ್ ಮತ್ತು ರಿಯಾಜ್ ಪಾಲ್ಗೊಂಡಿದ್ದರು.