image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಎಂಡಿಎಂಎ ಮಾರಾಟ ಜಾಲ ಪತ್ತೆ - ನಾಲ್ವರು ಆರೋಪಿಗಳ ಬಂಧನ

ಎಂಡಿಎಂಎ ಮಾರಾಟ ಜಾಲ ಪತ್ತೆ - ನಾಲ್ವರು ಆರೋಪಿಗಳ ಬಂಧನ

ವಿಟ್ಲ: ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎ (MDMA) ಶೇಖರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ವಿಟ್ಲ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ ಸುಮಾರು 1.79 ಲಕ್ಷ ರೂ. ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ನೇರಳಕಟ್ಟೆ ಇಂದಿರಾ ನಗರದ ಬಾಡಿಗೆ ಮನೆಯೊಂದರಲ್ಲಿ ಅಶ್ರಫ್ ಜಿ ಎಂಬಾತನು ಎಂಡಿಎಂಎ ಮಾದಕ ವಸ್ತುವನ್ನು ಇರಿಸಿಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ (ತನಿಖೆ-1) ರತ್ನಕುಮಾರ್ ಎಂ ಮತ್ತು ಸಿಬ್ಬಂದಿಗಳು ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿರುವ ಅಶ್ರಫ್ ವಾಸವಿದ್ದ ಮನೆಗೆ ದಾಳಿ ನಡೆಸಿದ್ದಾರೆ.ದಾಳಿಯ ವೇಳೆ ಮನೆಯಲ್ಲಿದ್ದ ಅಶ್ರಫ್ ಜಿ (38), ಬಂಟ್ವಾಳ ನಿವಾಸಿ. ಹಫೀಝ್‌ ಅಲಿಯಾಸ್ ಅಪ್ಪಿ. ಅಫ್ವಾನ್. ಅಶ್ರಫ್ ಎನ್.ಎ. ವಶಕ್ಕೆ ಪಡೆಯಲಾಗಿದೆ.
ಆರೋಪಿಗಳ ವಶದಿಂದ ಒಟ್ಟು 17.97 ಗ್ರಾಂ ತೂಕದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ 1,79,700 ರೂ. ಎಂದು ತಿಳಿದುಬಂದಿದೆ. ಇದರೊಂದಿಗೆ ಕೃತ್ಯಕ್ಕೆ ಬಳಸಲಾಗಿದ್ದ ಚೂರಿ ಹಾಗೂ ಇತರ ಸಾಮಗ್ರಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಈ ಕಾರ್ಯಾಚರಣೆಯ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 61/2026 ರಂತೆ, ಎನ್‌ಡಿಪಿಎಸ್ ಕಾಯ್ದೆ (NDPS Act 1985) ಕಲಂ 8(C), 22(C) ಹಾಗೂ ಆರ್ಮ್ಸ್ ಆಕ್ಟ್ ಕಲಂ 27 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Category
ಕರಾವಳಿ ತರಂಗಿಣಿ