image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಬೂಬಕ್ಕರ್‌ಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಬೂಬಕ್ಕರ್‌ಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿ ಅಬೂಬಕ್ಕರ್ (50) ಎಂಬಾತನಿಗೆ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (FTSC-2) 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 50,000 ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

​ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣದ (ಅ ಕ್ರ 135/25) ತನಿಖೆಯನ್ನು ಅಂದಿನ ಪೊಲೀಸ್ ನಿರೀಕ್ಷಕ ಶಿವಕುಮಾರ ಬಿ ಅವರು ನಡೆಸಿ, ಅಗತ್ಯ ಸಾಕ್ಷ್ಯಗಳೊಂದಿಗೆ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮಂಗಳೂರಿನ ಫಾಸ್ಟ್ ಟ್ರ್ಯಾಕ್ ಸ್ಪೆಷಲ್ ಕೋರ್ಟ್, ಮಾರ್ಚ್ 7, 2026 ರಂದು ಆರೋಪಿಯನ್ನು ದೋಷಿ ಎಂದು ಘೋಷಿಸಿ ಶಿಕ್ಷೆ ಪ್ರಕಟಿಸಿದೆ.

Category
ಕರಾವಳಿ ತರಂಗಿಣಿ