image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ದೀರ್ಘಕಾಲದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

​ಬಂಟ್ವಾಳ ವೀರ ಕಂಬ ನಿವಾಸಿ ಮಹಮ್ಮದ್ ಅಶ್ರಫ್ (38) ಬಂಧಿತ ಆರೋಪಿಯಾಗಿದ್ದಾನೆ. ಈತ ಬಂಟ್ವಾಳ ನಗರ ಪೊಲೀಸ್ ಠಾಣೆಯ ಅ.ಕ್ರ: 117/2019 ಮತ್ತು ಅ.ಕ್ರ: 111/2020 ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

​ಈತನ ವಿರುದ್ಧ ಬಂಟ್ವಾಳದ ಎಸಿಜೆ (ACJ) ಮತ್ತು ಜೆಎಂಎಫ್‌ಸಿ (JMFC) ನ್ಯಾಯಾಲಯದಿಂದ 10ಕ್ಕೂ ಅಧಿಕ ಬಾರಿ ವಾರೆಂಟ್ ಜಾರಿಯಾಗಿದ್ದರೂ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್‌ಐ (ASI) ಸುಜು ಮತ್ತು ಸಿಎಚ್‌ಸಿ (CHC) 665 ರವರು ಆರೋಪಿಯನ್ನು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ