image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕಳ್ಳತನ: ಶಂಕಿತ ವ್ಯಕ್ತಿಯ ಪತ್ತೆಗೆ ಸಾರ್ವಜನಿಕರ ಸಹಾಯಕ್ಕೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕಳ್ಳತನ: ಶಂಕಿತ ವ್ಯಕ್ತಿಯ ಪತ್ತೆಗೆ ಸಾರ್ವಜನಿಕರ ಸಹಾಯಕ್ಕೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವ್ಯಾಪ್ತಿಗಳಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ತನಿಖೆಯನ್ನು ಚುರುಕುಗೊಳಿಸಿದೆ. ಈ ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆಯಿರುವ ವ್ಯಕ್ತಿಯ ಭಾವಚಿತ್ರವನ್ನು ಬಿಡುಗಡೆ ಮಾಡಲಾಗಿದ್ದು, ಆತನ ಪತ್ತೆಗಾಗಿ ಸಾರ್ವಜನಿಕರ ಸಹಕಾರವನ್ನು ಕೋರಲಾಗಿದೆ.

ಜಿಲ್ಲಾ ವ್ಯಾಪ್ತಿಯ ಪ್ರದೇಶಗಳಲ್ಲಿ ನಡೆದಿರುವ ಕಳ್ಳತನ ಕೃತ್ಯಗಳಲ್ಲಿ ಈ ವ್ಯಕ್ತಿಯು ಭಾಗಿಯಾಗಿರುವ ಸಾಧ್ಯತೆಗಳಿದ್ದು, ಪೊಲೀಸರು ಆತನ ಚಲನವಲನದ ಮೇಲೆ ನಿಗಾ ಇರಿಸಿದ್ದಾರೆ. ಈ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಲಭ್ಯವಾದಲ್ಲಿ ಅಥವಾ ಆತ ಎಲ್ಲಾದರೂ ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ವಿನಂತಿಸಿದ್ದಾರೆ.

ನಾಗರಿಕರು ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು:
ಸುಳ್ಯ ಪೊಲೀಸ್ ಠಾಣೆ: 08257-230337
ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರು: 9480805365
ದಕ್ಷಿಣ ಕನ್ನಡ ಜಿಲ್ಲಾ ಕಂಟ್ರೋಲ್ ರೂಂ: 9480805300 / 0824-2220500
ತುರ್ತು ಸಹಾಯವಾಣಿ: 112

Category
ಕರಾವಳಿ ತರಂಗಿಣಿ