image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ನಡೆದಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ಕಳವು ಮಾಡಲಾದ ಸ್ಕೂಟರ್‌ ಅನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಸಜೀಪ ಮುನ್ನೂರು ನಿವಾಸಿ ಹಸನ್ ಬಾವ (55) ಮತ್ತು ಬಿ. ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ (37) ಎಂದು ಗುರುತಿಸಲಾಗಿದೆ. ಕಳೆದ ಮಾರ್ಚ್ 21ರಂದು ಪರ್ಲಿಯಾ ಎಂಬಲ್ಲಿನ ವಸತಿಗೃಹವೊಂದರ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್ ಕಳವಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತರಿಂದ ಸುಮಾರು 50,000 ರೂಪಾಯಿ ಮೌಲ್ಯದ ಸ್ಕೂಟರ್‌ನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳ ವಿರುದ್ಧ ಬಿ.ಎನ್.ಎಸ್ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ