image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಗೂನಡ್ಕ ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆಂಧ್ರ ಮೂಲದ ಆರೋಪಿ ಸುಳ್ಯ ಪೊಲೀಸರ ವಶಕ್ಕೆ

ಗೂನಡ್ಕ ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆಂಧ್ರ ಮೂಲದ ಆರೋಪಿ ಸುಳ್ಯ ಪೊಲೀಸರ ವಶಕ್ಕೆ

ಸುಳ್ಯ: ಸಂಪಾಜೆಯ ಗೂನಡ್ಕದಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿಯನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ನಿವಾಸಿ ಮಹಮ್ಮದ್ ಸಲ್ಮಾನ್ (35) ಎಂದು ಗುರುತಿಸಲಾಗಿದೆ. ಮಾರ್ಚ್ 30 ರಂದು ನಡೆದಿದ್ದ ಈ ಕಳವು ಪ್ರಕರಣದ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

​ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಏಪ್ರಿಲ್ 6 ರಂದು ಸುಳ್ಯದ ಕೆಮ್ರಾಜೆ ಎಲಿಮಲೆ ಎಂಬಲ್ಲಿ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ 2,000 ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಸುಳ್ಯ ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Category
ಕರಾವಳಿ ತರಂಗಿಣಿ