image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಂಚಾರಕ್ಕೆ ಅಡ್ಡಿಪಡಿಸಿದ ರಾಯಲ್ ಪ್ಯಾಲೇಸ್ ಹಾಗೂ ಒಂಡೆಲಾ ಹಾಲ್ ಮಾಲೀಕರ ವಿರುದ್ಧ ಪ್ರಕರಣ ದಾಖಲು

ಸಂಚಾರಕ್ಕೆ ಅಡ್ಡಿಪಡಿಸಿದ ರಾಯಲ್ ಪ್ಯಾಲೇಸ್ ಹಾಗೂ ಒಂಡೆಲಾ ಹಾಲ್ ಮಾಲೀಕರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಹಿನ್ನೆಲೆಯಲ್ಲಿ ಗಂಜಿಮಠದ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್‌ನ ಮಾಲೀಕರು ಹಾಗೂ ಆಯೋಜಕರ ವಿರುದ್ಧ ಬಜಪೆ ಪೊಲೀಸರು ಶಿಸ್ತುಕ್ರಮ ಜರುಗಿಸಿದ್ದಾರೆ.

ದಿನಾಂಕ 12-04-2026ರಂದು ಮಧ್ಯಾಹ್ನ ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ಇರುವ ಈ ಕಲ್ಯಾಣ ಮಂಟಪಗಳಲ್ಲಿ ಮದುವೆ ಕಾರ್ಯಕ್ರಮಗಳು ನಡೆದಿದ್ದವು. ಈ ವೇಳೆ ಕಾರ್ಯಕ್ರಮಕ್ಕೆ ಬಂದಿದ್ದ ವಾಹನಗಳಿಗೆ ಮಾಲೀಕರು ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿರಲಿಲ್ಲ. ಪರಿಣಾಮವಾಗಿ, ವಾಹನಗಳನ್ನು ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಅಡ್ಡಾದಿಡ್ಡಿಯಾಗಿ ನಿಲ್ಲಿಸಲಾಗಿದ್ದು, ಸುಮಾರು ಎರಡು ಗಂಟೆಗಳ ಕಾಲ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿತ್ತು.

ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಕ್ರಮವಾಗಿ ಅಡ್ಡಿಪಡಿಸಿ ಸಾರ್ವಜನಿಕರ  ಸುರಕ್ಷತೆಗೆ ಅಪಾಯ ತಂದೊಡ್ಡಿರುವ ಹಿನ್ನೆಲೆಯಲ್ಲಿ, ಬಜಪೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್‌ನ ಮಾಲೀಕರು ಹಾಗೂ ಆಯೋಜಕರ ಮೇಲೆ ಬಿ.ಎನ್.ಎಸ್ (BNS) ಕಾಯ್ದೆಯ ಕಲಂ 126(2), 285, 292 ಮತ್ತು ಮೋಟಾರು ವಾಹನ ಕಾಯ್ದೆಯ ಕಲಂ 122ರ ಅಡಿಯಲ್ಲಿ ಮೊಕದ್ದಮೆ ಹೂಡಲಾಗಿದ್ದು, ತನಿಖೆ ಮುಂದುವರಿದಿದೆ.

Category
ಕರಾವಳಿ ತರಂಗಿಣಿ