image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಕ್ರಮವಾಗಿ ಸ್ಫೋಟಕ ಸಂಗ್ರಹಿಸುತ್ತಿದ್ದ ವ್ಯಕ್ತಿಯ ಬಂಧನ

ಅಕ್ರಮವಾಗಿ ಸ್ಫೋಟಕ ಸಂಗ್ರಹಿಸುತ್ತಿದ್ದ ವ್ಯಕ್ತಿಯ ಬಂಧನ

ವಿಟ್ಲ: ಯಾವುದೇ ಮುನ್ನೆಚ್ಚರಿಕೆ ವಹಿಸದೆ ಮನೆಯ ಆವರಣದಲ್ಲಿ ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಶೇಖರಿಸಿಟ್ಟು ಸುಡುಮದ್ದು ತಯಾರಿಸುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಂಬಳಬೆಟ್ಟು ಬಳಿಯ ಅಮೈ ನಿವಾಸಿ ಜಗದೀಶ ಪೂಜಾರಿ ಎಂದು ಗುರುತಿಸಲಾಗಿದೆ. ದಿನಾಂಕ 13-04-2026ರಂದು ರಾತ್ರಿ ಜಗದೀಶ ಅವರು ತಮ್ಮ ಮನೆಯ ಆವರಣದಲ್ಲಿ ಸ್ಫೋಟಕಗಳನ್ನು ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್‌ ಠಾಣೆಯ ಉಪ ನಿರೀಕ್ಷಕರಾದ ಬಿ.ಎಸ್. ನಾಯಕ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ದಾಳಿ ನಡೆಸಿದಾಗ ಸುಮಾರು 1.9 ಕೆ.ಜಿ ತೂಕದ ಸಂಶಯಾಸ್ಪದ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ.
ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಜನವಸತಿ ಪ್ರದೇಶದಲ್ಲಿ ಅಪಾಯಕಾರಿ ವಸ್ತುಗಳನ್ನು ಇರಿಸಿದ್ದಕ್ಕಾಗಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 93/2026ರಂತೆ ಸ್ಫೋಟಕ ಕಾಯ್ದೆ (Explosive Act) ಹಾಗೂ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Category
ಕರಾವಳಿ ತರಂಗಿಣಿ