image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಹೆಸರಲ್ಲಿ ನಕಲಿ ಜಾಹೀರಾತು: ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ವಿಮಾನ ನಿಲ್ದಾಣ ಪ್ರಾಧಿಕಾರ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಹೆಸರಲ್ಲಿ ನಕಲಿ ಜಾಹೀರಾತು: ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ವಿಮಾನ ನಿಲ್ದಾಣ ಪ್ರಾಧಿಕಾರ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (MIA) ವಿವಿಧ ಹುದ್ದೆಗಳಿಗೆ ಬೃಹತ್ ನೇಮಕಾತಿ ನಡೆಯುತ್ತಿದೆ ಎಂಬ ಸುಳ್ಳು ಜಾಹೀರಾತೊಂದು ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ಭಾರಿ ಸದ್ದು ಮಾಡುತ್ತಿದ್ದು, ಈ ಕುರಿತು ವಿಮಾನ ನಿಲ್ದಾಣ ಪ್ರಾಧಿಕಾರವು ಸ್ಪಷ್ಟನೆ ನೀಡಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ವಾಟ್ಸಾಪ್ ಮತ್ತು ಫೇಸ್‌ಬುಕ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ನಕಲಿ ಜಾಹೀರಾತಿನಲ್ಲಿ ಬ್ಯಾಗೇಜ್ ಹ್ಯಾಂಡ್ಲರ್, ಕ್ಲೀನರ್, ಟ್ರಾಲಿ ಬಾಯ್, ಭದ್ರತಾ ಸಿಬ್ಬಂದಿ ಮತ್ತು ಕಾರ್ಗೋ ಲೋಡರ್ ಹುದ್ದೆಗಳಿಗೆ 32,800 ರಿಂದ 52,700 ರೂಪಾಯಿಗಳವರೆಗೆ ಭಾರಿ ವೇತನ ನೀಡಲಾಗುವುದು ಎಂದು ಆಮಿಷ ಒಡ್ಡಲಾಗಿದೆ. ಅಲ್ಲದೆ, ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಉದ್ಯೋಗಾಕಾಂಕ್ಷಿಗಳನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡಲಾಗಿದೆ.

ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ, "ವಿಮಾನ ನಿಲ್ದಾಣವು ಇಂತಹ ಯಾವುದೇ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತಿಲ್ಲ. ಜಾಹೀರಾತಿನಲ್ಲಿ ಉಲ್ಲೇಖಿಸಲಾದ ಹುದ್ದೆಗಳು ಸಾಮಾನ್ಯವಾಗಿ ವಿವಿಧ ವಿಮಾನಯಾನ ಸಂಸ್ಥೆಗಳಿಗೆ (Airlines) ಸಂಬಂಧಿಸಿದ್ದಾಗಿರುತ್ತವೆಯೇ ಹೊರತು, ವಿಮಾನ ನಿಲ್ದಾಣ ನಿರ್ವಾಹಕ ಸಂಸ್ಥೆಗೆ (Airport Operator) ಸಂಬಂಧಿಸಿದ್ದಲ್ಲ. ಸಾರ್ವಜನಿಕರು ಮತ್ತು ಉದ್ಯೋಗಾಕಾಂಕ್ಷಿಗಳು ಇಂತಹ ನಕಲಿ ಸಂದೇಶಗಳನ್ನು ನಂಬಬಾರದು" ಎಂದು ತಿಳಿಸಿದೆ.

Category
ಕರಾವಳಿ ತರಂಗಿಣಿ