ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಶಂಕಿತನಿಗಾಗಿ ಸಾರ್ವಜನಿಕರಿಂದ ಸಹಕಾರ ಕೋರಿದ್ದಾರೆ. ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪರಿಸರಗಳಲ್ಲಿ ಕಳೆದ ಎರಡು ದಿನಗಳಲ್ಲಿ ನಡೆದಿರುವ ಮನೆಗಳ್ಳತನ ಪ್ರಕರಣಗಳಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಬು ನಿವಾಸಿ ತಂಗಚ್ಚ @ ಮ್ಯಾಥ್ಯೂ @ ಬಶೀರ್ ಎಂಬಾತನ ಮೇಲೆ ಸಂಶಯ ವ್ಯಕ್ತವಾಗಿದೆ.
ಈತನ ವಿರುದ್ಧ ಈಗಾಗಲೇ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜಾಮೀನುರಹಿತ ಬಂಧನ ವಾರಂಟ್ ಜಾರಿಯಾಗಲು ಬಾಕಿಯಿದೆ ಎಂದು ತಿಳಿದುಬಂದಿದೆ. ಶಂಕಿತನ ಚಲನವಲನಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ತಿಳಿಸಲು ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ.
ಮಾಹಿತಿ ನೀಡಲು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು:
ಉಪ್ಪಿನಂಗಡಿ ಪೊಲೀಸ್ ಠಾಣೆ: 08251-251055, 9480805362
ಬೆಳ್ತಂಗಡಿ ಪೊಲೀಸ್ ಠಾಣೆ: 08256-232093, 9480805370
ಪುತ್ತೂರು ಪೊಲೀಸ್ ಠಾಣಾ ಉಪನಿರೀಕ್ಷಕರು: 08251-230555, 9480805361
ದಕ್ಷಿಣ ಕನ್ನಡ ಜಿಲ್ಲಾ ಕಂಟ್ರೋಲ್ ರೂಂ: 9480805300 / 0824 2220500
ಸಾರ್ವಜನಿಕರು ಎಚ್ಚರಿಕೆಯಿಂದಿದ್ದು, ಯಾವುದೇ ಅನುಮಾನಾಸ್ಪದ ವ್ಯಕ್ತಿ ಅಥವಾ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.