image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಾರಿನಲ್ಲಿ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಮೂವರ ಬಂಧನ: 7.64 ಲಕ್ಷ ರೂ. ಮೌಲ್ಯದ ಮಾದಕವಸ್ತು ವಶ

ಕಾರಿನಲ್ಲಿ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಮೂವರ ಬಂಧನ: 7.64 ಲಕ್ಷ ರೂ. ಮೌಲ್ಯದ ಮಾದಕವಸ್ತು ವಶ

ಬಂಟ್ವಾಳ: ಮಾದಕವಸ್ತು ಎಂಡಿಎಂಎ (MDMA) ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಜೂನ್ 4, 2026ರ ಸಂಜೆ ಮೆಲ್ಕಾರ್ ಫ್ಲೈಓವರ್ ಬಳಿ ಕಾರೊಂದನ್ನು ತಪಾಸಣೆ ನಡೆಸಿದ ಸಂದರ್ಭದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳಾದ ಬಂಟ್ವಾಳ ಪುದು ನಿವಾಸಿ ಎ. ಜುಬೈರ್ (39), ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಮತ್ತು ಬಿ. ಮೂಡ ನಿವಾಸಿ ಬಿ.ಎಂ. ರಶೀದ್ ಯಾನೆ ಮಾರಿಮುತ್ತು ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕಾರಿನಲ್ಲಿ ಎಂಡಿಎಂಎ ಮಾದಕವಸ್ತುವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ತಪಾಸಣೆಯ ವೇಳೆ ಇವರಿಂದ ಸುಮಾರು 7,64,000 ರೂಪಾಯಿ ಮೌಲ್ಯದ 76.40 ಗ್ರಾಂ ಎಂಡಿಎಂಎ, ಮಾದಕವಸ್ತು ಸೇವನೆಗೆ ಬಳಸುವ ಸಾಧನಗಳು, ಮೂರು ಮೊಬೈಲ್ ಫೋನ್‌ಗಳು ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

Category
ಕರಾವಳಿ ತರಂಗಿಣಿ