ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ.
ಜೂನ್ 24, 2026 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ವ್ಯಾಪ್ತಿಯ ಬೋಳಾರದ ಮುಳಿಹಿತ್ಲು ಬಳಿ ಈ ಕಾರ್ಯಾಚರಣೆ ನಡೆದಿದೆ. 29 ವರ್ಷದ ಧನುಷ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನಿಂದ 3.32 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.