image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಮಚ್ಚಿನಿಂದ ಭೀಕರ ಹಲ್ಲೆ: ಆರೋಪಿ ಸೆರೆ

ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಮಚ್ಚಿನಿಂದ ಭೀಕರ ಹಲ್ಲೆ: ಆರೋಪಿ ಸೆರೆ

ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೊಂತಿಮಾರು ಬಸ್ ನಿಲ್ದಾಣದ ಬಳಿ ಕಾಲೇಜಿಗೆ ತೆರಳಲು ಕಾಯುತ್ತಿದ್ದ 17 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಇಂದು (ಜುಲೈ 6, 2026) ಬೆಳಗ್ಗೆ ಸುಮಾರು 8:45 ಗಂಟೆಗೆ ನಡೆದಿದೆ. ಈ ಘಟನೆಯಲ್ಲಿ ಬಾಲಕಿಯ ತಲೆ ಹಾಗೂ ಕೈಗೆ ಗಂಭೀರ ಗಾಯಗಳಾಗಿದ್ದು, ಆಕೆಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಬಂಟ್ವಾಳ ಮಂಚಿ ನಿವಾಸಿ 28 ವರ್ಷದ ಮೊಹಮ್ಮದ್ ಜವ್ವಾರ್ ಎಂದು ಗುರುತಿಸಲಾಗಿದ್ದು, ಕೃತ್ಯವೆಸಗಿದ ತಕ್ಷಣ ಆತ ಸ್ವತಃ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ.

Category
ಕರಾವಳಿ ತರಂಗಿಣಿ