ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಂಗಿಪೇಟೆಯಲ್ಲಿ ಕಾರ್ಯಚರಿಸುತ್ತಿದ್ದ ಕೆನರಾ ಬ್ಯಾಂಕಿನ ಮೇಲ್ಛಾವಣಿಯನ್ನು ಕೊರೆದು ಒಳಪ್ರವೇಶಿಸಿ, ಹಣ ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಮಾರಿಪಳ್ಳ ನಿವಾಸಿ ಮೊಹಮ್ಮದ್ ಶಾಕಿರ್ (33) ಬಂಧಿತ ಆರೋಪಿ. ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಜೂನ್ 13, 2026 ರಂದು ಬ್ಯಾಂಕ್ ಛಾವಣಿ ಕೊರೆದು ಕಳ್ಳತನಕ್ಕೆ ಯತ್ನ ನಡೆದಿತ್ತು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 106/2026, ಕಲಂ: 331(3), 331(4), 305(a), 62 BNS 2023 ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಜುಲೈ 22, 2026 ರಂದು ಆರೋಪಿ ಮೊಹಮ್ಮದ್ ಶಾಕಿರ್‌ನನ್ನು ದಸ್ತಗಿರಿ ಮಾಡಿದ್ದು, ಸದ್ಯ ತನಿಖೆ ಮುಂದುವರೆದಿದೆ.