image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಜಂತರ್ ಮಂತರ್ ನ ಸಿಜೆಪಿ ಪ್ರತಿಭಟನೆ: 480ಕ್ಕೂ ಹೆಚ್ಚು ಪಾಕ್ ಖಾತೆ ಬ್ಲಾಕ್

ಜಂತರ್ ಮಂತರ್ ನ ಸಿಜೆಪಿ ಪ್ರತಿಭಟನೆ: 480ಕ್ಕೂ ಹೆಚ್ಚು ಪಾಕ್ ಖಾತೆ ಬ್ಲಾಕ್

ನವದೆಹಲಿ : ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಯ ಸಂದರ್ಭದಲ್ಲಿ ತಪ್ಪು ಮಾಹಿತಿ ಹಾಗೂ ವದಂತಿಗಳನ್ನು ಹರಡುತ್ತಿದ್ದ ಪಾಕಿಸ್ತಾನ ಮೂಲದ 480ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳನ್ನು ದೆಹಲಿ ಪೊಲೀಸರು ಗುರುತಿಸಿ ನಿರ್ಬಂಧಿಸಿದ್ದಾರೆ. 'ಆಪರೇಷನ್ ಸಿಂದೂರ್' ಸಮಯದಲ್ಲಿ ಸಕ್ರಿಯವಾಗಿದ್ದ ಖಾತೆಗಳೇ ಈಗ ಮತ್ತೆ ಸಕ್ರಿಯವಾಗಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಪೋಸ್ಟ್‌ಗಳು, ಸಂಪಾದಿತ ವಿಡಿಯೋಗಳು ಮತ್ತು ಅನಾಮಧೇಯ ಖಾತೆಗಳ ಮೂಲಕ ದೇಶದ ಯುವಕರು ಹಾಗೂ ವಿದ್ಯಾರ್ಥಿಗಳನ್ನು ಪ್ರಚೋದಿಸಲು ಯತ್ನಿಸಲಾಗುತ್ತಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ಎಚ್ಚರಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿಯ ದುರ್ಲಾಭ ಪಡೆದುಕೊಂಡು ಅಶಾಂತಿ ಸೃಷ್ಟಿಸುವುದು ಈ ಖಾತೆಗಳ ಮುಖ್ಯ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇಂತಹ ಸುಳ್ಳು ಸುದ್ದಿ ಹಾಗೂ ಪ್ರಚೋದನಕಾರಿ ವಿಷಯಗಳಿಗೆ ಬಲಿಯಾಗಬಾರದೆಂದು ಪೊಲೀಸರು ಮನವಿ ಮಾಡಿದ್ದಾರೆ. ಯಾವುದೇ ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಅಥವಾ ಫಾರ್ವರ್ಡ್ ಮಾಡುವ ಮೊದಲು ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ನಾಗರಿಕರ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ದೆಹಲಿ ಪೊಲೀಸರು ಗೌರವಿಸುತ್ತಾರೆ, ಆದರೆ ಸಮಾಜವಿರೋಧಿ ಶಕ್ತಿಗಳು ನಿಮ್ಮ ಭಾವನೆಗಳನ್ನು ದುರ್ಬಳಕೆ ಮಾಡಿಕೊಳ್ಳಲು ಬಿಡಬೇಡಿ ಹಾಗೂ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಹಕರಿಸಿ ಎಂದು ದೆಹಲಿ ಪೊಲೀಸರು ಕೋರಿದ್ದಾರೆ.

Category
ಕರಾವಳಿ ತರಂಗಿಣಿ