image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಲಾಲ್‌ಬಾಗ್ ಸಿಗ್ನಲ್ ಬಳಿ ಬೈಕ್ ಸವಾರನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಲಾಲ್‌ಬಾಗ್ ಸಿಗ್ನಲ್ ಬಳಿ ಬೈಕ್ ಸವಾರನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಮಂಗಳೂರು: ನಗರದ ಪ್ರಮುಖ ವಲಯವಾದ ಲಾಲ್‌ಬಾಗ್ ಸಿಗ್ನಲ್ ಸಮೀಪ  ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ವಿಕ್ಕಿ ಬಪ್ಪಾಲ್ ಎಂದು ಪ್ರಾಥಮಿಕವಾಗಿ ಗುರುತಿಸಲ್ಪಟ್ಟಿರುವ ಯುವಕನು ಇಂದು ಮಧ್ಯಾಹ್ನ ಸುಮಾರು 1:45 ರ ಸುಮಾರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ. ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಇವರನ್ನು ಹಿಂಬಾಲಿಸಿಕೊಂಡು ಬಂದ ಏಕಾಂಗಿ ಬೈಕ್ ಸವಾರನೊಬ್ಬ ಚಲಿಸುತ್ತಿದ್ದಂತೆಯೇ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.
ಹಲ್ಲೆಯ ತೀವ್ರತೆಗೆ ಬೈಕ್ ಸವಾರನ ಕುತ್ತಿಗೆಯ ಭಾಗಕ್ಕೆ ಆಳವಾದ ಗಾಯವಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ನಗರದಾದ್ಯಂತ  ಶೋಧ ಕಾರ್ಯ ಮುಂದುವರೆದಿದೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಲಿದ್ದು, ಪೂರ್ವ ವಲಯದ ಪೊಲೀಸ್ ಇನ್‌ಸ್ಪೆಕ್ಟರ್ (PI East) ತನಿಖೆಯನ್ನು ಕೈಗೊಳ್ಳಲಿದ್ದಾರೆ.

Category
ಕರಾವಳಿ ತರಂಗಿಣಿ