ಸುಳ್ಯ: ಸುಳ್ಯ ವಲಯ ವಾಪ್ತಿಯ ಅರಂತೋಡು ಗ್ರಾಮದಲ್ಲಿ ಅಬಕಾರಿ ಗಸ್ತು ನಡೆಸುತ್ತಿದ್ದಾಗ ದೊರೆತ ಮಾಹಿತಿಯ ಮೇರೆಗೆ ಗೂನಡ್ಕ ಪ್ರದೇಶದ ಪಯಶ್ವಿನಿ ರಿಫ್ರೆಶ್ ಮೆಂಟ್ ಅಂಡ್ ಕೂಲ್ ಜೋನ್ ಅಂಗಡಿಯಲ್ಲಿ ಅಕ್ರಮವಾಗಿ ಒಟ್ಟು 111. 750 ಲೀಟರ್ ಕೂರ್ಗ್ ವಿಂಟೇಜ್ ಹೋಮ್ ಮೇಡ್ ವೈನ್ ಸಂಗ್ರಹ ಇಟ್ಟಿರುವುದನ್ನು ಪತ್ತೆ ಹಚ್ಚಿ ಅಂಗಡಿ ಮಾಲೀಕ ಮುರಾರಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಬಕಾರಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.