image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

7ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ

7ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ

ಮಂಗಳೂರು: ಸುಮಾರು ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಗೂ ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ 30ಕ್ಕೂ ಅಧಿಕ ವಾರಂಟ್‌ಗಳು ಜಾರಿಯಾಗಿದ್ದ ಆರೋಪಿಯನ್ನು ಮಂಗಳೂರು ದಕ್ಷಿಣ ಉಪವಿಭಾಗದ ವಿಶೇಷ ಕರ್ತವ್ಯ ತಂಡ ಬಂಧಿಸಿದೆ.

ಉಮ್ಮರ್ ನವಾಫ್ ಬಂಧಿತ ಆರೋಪಿ. ಈತನ ವಿರುದ್ಧ 13ಕ್ಕೂ ಅಧಿಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ 30ಕ್ಕೂ ಹೆಚ್ಚು ವಾರಂಟ್‌ಗಳನ್ನು ನ್ಯಾಯಾಲಯ ಹೊರಡಿಸಿತ್ತು.

ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ವಿಶೇಷ ಕರ್ತವ್ಯ ತಂಡವು ಆಗಸ್ಟ್ 2, 2026ರಂದು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದುದಂಡೆಯ ಪೊಲೀಸರು ತಿಳಿಸಿದ್ದಾರೆ.

ಉಳ್ಳಾಲ ಪೊಲೀಸ್ ಠಾಣೆಯ 2015ರ ಮೊಕದ್ದಮೆ ಸಂಖ್ಯೆ 276/15ರಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಾದ 143, 144, 148, 448, 451, 452, 326, 307, 397, 506 ಹಾಗೂ 149 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ನ್ಯಾಯಾಲಯವು ಎಲ್.ಪಿ.ಸಿ. (Long Pending Case) ಜಾರಿ ಮಾಡಿತ್ತು.

Category
ಕರಾವಳಿ ತರಂಗಿಣಿ