image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಮಾಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ಸೆರೆ

ಮಂಗಳೂರು ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಮಾಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ಸೆರೆ

ಮಂಗಳೂರು : ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿಮೊಗರು ಪ್ರದೇಶದ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 04, 2026 ರಂದು ಜೆಪ್ಪಿಮೊಗರು ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿ ಕಳ್ಳರು ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ್ದರು. ಮನೆಯ ಕಪಾಟಿನಲ್ಲಿದ್ದ 14 ಗ್ರಾಂ ಚಿನ್ನದ ಸರ, ತಲಾ 2 ಗ್ರಾಂ ತೂಕದ 2 ಉಂಗುರಗಳು ಹಾಗೂ 25,000/- ರೂ. ನಗದು ಹಣವನ್ನು ಕಳವು ಮಾಡಿದ್ದರು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ 106/2026, ಕಲಂ 305(a), 331(3) ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಆಗಸ್ಟ್ 11, 2026 ರಂದು ಮಂಗಳೂರು ನಗರದ ತಲಪಾಡಿ ಬಸ್ ನಿಲ್ದಾಣದ ಬಳಿ ಆರೋಪಿಯಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಪ್ರಕರಣದ ಆರೋಪಿಯಾದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ ಜತ್ ತಾಲೂಕು ನರಳೆವಾಡಿ ಗ್ರಾಮದ ಸಮಧನ ಸಹಕಾರಿ ನರಳೆ (26) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

​ಆರೋೋಪಿಯಿಂದ ಕಳವು ಮಾಡಲಾದ ಸೊತ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ