ಗುಜರಾತ್ : ಪ್ರಧಾನಿ ನರೇಂದ್ರ ಮೋದಿ ಅವರ ವಿರೋಧಿಗಳ ತೀವ್ರ ಟೀಕೆಗಳು ಹಾಗೂ ವಿವಾದಗಳ ನಡುವೆಯೂ ಗುಜರಾತ್‌ನ ಗಾಂಧಿನಗರ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭರ್ಜರಿ ಜಯಗಳಿಸಿದೆ. ಒಟ್ಟು 44 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 38 ಸ್ಥಾನಗಳನ್ನು ಬಾಚಿಕೊಳ್ಳುವ ಮೂಲಕ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ.
ವಿರೋಧ ಪಕ್ಷಗಳ ಪ್ರಮುಖ ಆರೋಪಗಳು ಮತ್ತು ಗದ್ದಲಗಳ ನಡುವೆಯೂ ನಡೆದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ 5 ಸ್ಥಾನಗಳನ್ನು ಪಡೆದುಕೊಂಡರೆ, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ (ಆಪ್) ಒಂದೇ ಒಂದು ಸ್ಥಾನವನ್ನೂ ಗೆಲ್ಲದೆ ಶೂನ್ಯ ಸಂಪಾದನೆ ಮಾಡಿದೆ. ಇನ್ನುಳಿದಂತೆ 1 ಸ್ಥಾನವು ಪಕ್ಷೇತರ ಅಭ್ಯರ್ಥಿಯ ಪಾಲಾಗಿದೆ. 2021ರ ಹಿಂದಿನ ಚುನಾವಣೆಗೆ ಹೋಲಿಸಿದರೆ ಕಾಂಗ್ರೆಸ್ ತನ್ನ ಸ್ಥಾನಬಲವನ್ನು ಸ್ವಲ್ಪ ಮಟ್ಟಿಗೆ (2 ರಿಂದ 5ಕ್ಕೆ) ಹೆಚ್ಚಿಸಿಕೊಂಡಿದ್ದರೂ, ಆಪ್ ಕಳೆದ ಬಾರಿ ಗಳಿಸಿದ್ದ ಏಕೈಕ ಸ್ಥಾನವನ್ನು ಕಳೆದುಕೊಂಡಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಎಷ್ಟೇ ಗಂಭೀರ ಆರೋಪಗಳನ್ನು ಮಾಡಿದ್ದರೂ, ಸ್ಥಳೀಯ ಮಟ್ಟದ ಮತದಾರರು ಮತ್ತೊಮ್ಮೆ ಬಿಜೆಪಿ ಸರ್ಕಾರದ ಕಡೆಗೆ ಒಲವು ತೋರಿದ್ದಾರೆ ಎಂಬುದು ಈ ಚುನಾವಣಾ ಫಲಿತಾಂಶದಿಂದ ಸ್ಪಷ್ಟವಾಗಿದೆ.