ನವದೆಹಲಿ :ಅನುಮತಿ ರದ್ದುಗೊಂಡಿದ್ದರೂ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಯತ್ನಿಸಿ ಬಂಧನಕ್ಕೊಳಗಾಗಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿದೆ. ಬ್ಯಾರಿಕೇಡ್‌ಗಳನ್ನು ನಿರ್ದಿಷ್ಟ ಉದ್ದೇಶಕ್ಕಾಗಿ ಹಾಕಲಾಗಿರುತ್ತದೆ ಎಂದು ನಾಯಕರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಲಯ, ಪ್ರತಿಭಟನೆ ಶಾಂತಿಯುತವಾಗಿರಬಹುದು ಎಂದುಕೊಂಡರೂ ಗುಂಪಿಗೆ ಸೇರುವ ಇತರೆ ವ್ಯಕ್ತಿಗಳಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಅಪಾಯವಿರುತ್ತದೆ ಎಂದು ಎಚ್ಚರಿಸಿದೆ. ಜಾಮೀನು ಬಾಂಡ್ ಉಲ್ಲಂಘನೆ ಪ್ರಕರಣದಲ್ಲಿ ಮೊದಲು ವಿಚಾರಣಾ ನ್ಯಾಯಾಲಯದ ಮೊರೆ ಹೋಗುವಂತೆ ಸೂಚಿಸಿದ ಹಿನ್ನೆಲೆಯಲ್ಲಿ, ಇಬ್ಬರೂ ನಾಯಕರು ಹೈಕೋರ್ಟ್‌ನಲ್ಲಿದ್ದ ತಮ್ಮ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.