image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ತೆಲಂಗಾಣದಲ್ಲಿ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಪರಿಹಾರ ಧನ 2 ಕೋಟಿ ರೂ.ಗೆ ಏರಿಕೆ

ತೆಲಂಗಾಣದಲ್ಲಿ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಪರಿಹಾರ ಧನ 2 ಕೋಟಿ ರೂ.ಗೆ ಏರಿಕೆ

ತೆಲಂಗಾಣ: ತೆಲಂಗಾಣದಲ್ಲಿ ಕರ್ತವ್ಯದ ವೇಳೆ ಪ್ರಾಣತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಗೆ ನೀಡಲಾಗುವ ಪರಿಹಾರ ಧನವನ್ನು 2 ಕೋಟಿ ರೂ.ವರೆಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಘೋಷಿಸಿದ್ದಾರೆ. ರಾಷ್ಟ್ರೀಯ ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಹೈದರಾಬಾದ್‌ನ ಗೋಶಾಲಿ ಮಹಲ್ ಪೊಲೀಸ್ ಕ್ರೀಡಾಂಗಣದಲ್ಲಿ ನಡೆದ ಪೆರೇಡ್‌ನಲ್ಲಿ ಅವರು ಈ ನಿರ್ಧಾರಗಳನ್ನು ಪ್ರಕಟಿಸಿದರು.

ಎಸ್‌ಪಿ ಮತ್ತು ಐಪಿಎಸ್ ಅಧಿಕಾರಿಗಳಿಗೆ ಪರಿಹಾರ ಧನವನ್ನು 1 ಕೋಟಿಯಿಂದ 2 ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ಡಿಎಸ್‌ಪಿ ಮತ್ತು ಅಡಿಷನಲ್ ಎಸ್‌ಪಿ ಅಧಿಕಾರಿಗಳಿಗೆ 1.50 ಕೋಟಿ ರೂ., ಇನ್ಸ್‌ಪೆಕ್ಟರ್‌ಗಳಿಗೆ 1.25 ಕೋಟಿ ರೂ., ಸಬ್‌-ಇನ್ಸ್‌ಪೆಕ್ಟರ್‌ಗಳಿಗೆ 1.25 ಕೋಟಿ ರೂ., ಹಾಗೂ ಹೆಡ್ ಕಾನ್‌ಸ್ಟೇಬಲ್ ಮತ್ತು ಎಎಸ್‌ಐಗೆ 1 ಕೋಟಿ ರೂ.ಗೆ ಪರಿಹಾರ ಧನವನ್ನು ಏರಿಕೆ ಮಾಡಲಾಗಿದೆ. ಹಾಗೆಯೇ ಹೋಮ್ ಗಾರ್ಡ್‌ಗಳಿಗೆ ನೀಡುತ್ತಿದ್ದ ಪರಿಹಾರವನ್ನು 5 ಲಕ್ಷ ರೂ.ದಿಂದ 10 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಇದರೊಂದಿಗೆ 2028ರ ವೇಳೆಗೆ ಪೊಲೀಸ್ ಇಲಾಖೆಯಲ್ಲಿರುವ ಎಲ್ಲಾ ಖಾಲಿ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

Category
ಕರಾವಳಿ ತರಂಗಿಣಿ