image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಪಾಟ್ನಾದಲ್ಲಿ ಖರ್ಗೆ ಭಾಷಣದ ವೇಳೆ ಗದ್ದಲ: ಮೋದಿ ಪರ ಘೋಷಣೆ ಕೂಗಿದ ವ್ಯಕ್ತಿಗೆ ಆಕ್ರೋಶದ ಪ್ರತ್ಯುತ್ತರ

ಪಾಟ್ನಾದಲ್ಲಿ ಖರ್ಗೆ ಭಾಷಣದ ವೇಳೆ ಗದ್ದಲ: ಮೋದಿ ಪರ ಘೋಷಣೆ ಕೂಗಿದ ವ್ಯಕ್ತಿಗೆ ಆಕ್ರೋಶದ ಪ್ರತ್ಯುತ್ತರ

ಪಾಟ್ನಾ : ಬಿಹಾರದ ಪಾಟ್ನಾದಲ್ಲಿ ಆಯೋಜಿಸಲಾಗಿದ್ದ ರಾಜ್ಯದ ಮೊದಲ ಮುಖ್ಯಮಂತ್ರಿ ಡಾ. ಶ್ರೀ ಕೃಷ್ಣ ಸಿಂಗ್ ಅವರ 139ನೇ ಜಯಂತಿ ಸಭಾಂಗಣದಲ್ಲಿ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡುತ್ತಿದ್ದರು. ತಮ್ಮ ಭಾಷಣದ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾಗ, ಸಭೆಯಲ್ಲಿದ್ದ ವ್ಯಕ್ತಿಯೊಬ್ಬರು ಮಧ್ಯಪ್ರವೇಶಿಸಿ “ಮೋದಿ ಎಲ್ಲಿಗೂ ಹೋಗುವುದಿಲ್ಲ, ಅವರು ಮುಂದೆಯೂ ಅಧಿಕಾರ ನಡೆಸುತ್ತಾರೆ” ಎಂದು ಜೋರಾಗಿ ಕಿರುಚುತ್ತಾ ಖರ್ಗೆಯ ಭಾಷಣಕ್ಕೆ ಅಡ್ಡಿಪಡಿಸಿದರು.

ಇದರಿಂದ ತೀವ್ರ ರೊಚ್ಚಿಗೆದ್ದ ಮಲ್ಲಿಕಾರ್ಜುನ ಖರ್ಗೆ ಅವರು, “ಮೋದಿ ಮಾತ್ರ ಅಲ್ಲ ಅವರಪ್ಪನೂ ಅಧಿಕಾರದಿಂದ ಇಳಿಬೇಕು, ನಡಿ ನೀನು” ಎಂದು ವೇದಿಕೆಯಿಂದಲೇ ಸಾರ್ವಜನಿಕವಾಗಿ ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಭೆಯಲ್ಲಿ ಇದ್ದಕ್ಕಿದ್ದಂತೆ ಮೋದಿ ಪರ ಘೋಷಣೆ ಕೇಳಿಬರುತ್ತಿದ್ದಂತೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಆ ವ್ಯಕ್ತಿಯನ್ನು ಸಮಾಧಾನಪಡಿಸಲು ಮುಂದಾಗಿದ್ದರಿಂದ ಕೆಲಕಾಲ ವೇದಿಕೆ ಮತ್ತು ಸಭಾಂಗಣದಲ್ಲಿ ಗೊಂದಲ ಹಾಗೂ ತೀವ್ರ ಗದ್ದಲದ ವಾತಾವರಣ ನಿರ್ಮಾಣವಾಯಿತು.

Category
ಕರಾವಳಿ ತರಂಗಿಣಿ