image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಸಿಂಧೂ ನೀರು ಒಪ್ಪಂದ: ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದ ಭಾರತ

ಸಿಂಧೂ ನೀರು ಒಪ್ಪಂದ: ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದ ಭಾರತ

ನವದೆಹಲಿ: ಸಿಂಧೂ ನದಿ ನೀರು ಒಪ್ಪಂದದ ಕುರಿತಾದ ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಸ್ಪಷ್ಟಪಡಿಸಿದೆ.

ನವದೆಹಲಿಯಲ್ಲಿ ನವೆಂಬರ್ 20 ರಿಂದ 22ರವರೆಗೆ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ (SCO) ಸಿವಿಲೈಸೇಷನಲ್ ಡೈಲಾಗ್ ಫೋರಮ್‌ನಲ್ಲಿ ಭಾಗವಹಿಸಲು ಪಾಕಿಸ್ತಾನದ ಸಚಿವ ಮುಸಾದಿಕ್ ಮಲಿಕ್ ಅವರು ಶುಕ್ರವಾರ ನವದೆಹಲಿಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಸಮಾವೇಶವನ್ನು ಉದ್ಘಾಟಿಸಿದ್ದು, ಕಳೆದ ವರ್ಷ 'ಆಪರೇಷನ್ ಸಿಂಧೂರ್' ನಂತರ ಮೇ 7-10ರ ಅವಧಿಯಲ್ಲಿ ನಡೆದ ಮಿಲಿಟರಿ ಸಂಘರ್ಷಗಳ ಬಳಿಕ ಭಾರತದ ಕಾರ್ಯಕ್ರಮವೊಂದಕ್ಕೆ ಪಾಕ್ ಸಚಿವರೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲಾಗಿದೆ.

ಪಾಕ್ ಸಚಿವರ ಭಾರತ ಭೇಟಿ ಹಾಗೂ ಸಿಂಧೂ ನದಿ ನೀರು ಒಪ್ಪಂದದ ಕುರಿತ ಅವರ ಹೇಳಿಕೆಗಳ ಬಗ್ಗೆ ದ್ವಿ-ಸಾಪ್ತಾಹಿಕ ಮಾಧ್ಯಮ ಸಂವಾದದಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, "ಸಿಂಧೂ ನದಿ ನೀರು ಒಪ್ಪಂದದ ವಿಷಯಕ್ಕೆ ಸಂಬಂಧಿಸಿದಂತೆ ನಾವು ಈಗಾಗಲೇ ನಮ್ಮ ನಿಲುವನ್ನು ಬಹಳ ಸ್ಪಷ್ಟವಾಗಿ ತಿಳಿಸಿದ್ದೇವೆ. ಅದು ಈಗಲೂ ಹಾಗೆಯೇ ಇದೆ, ಅದರಲ್ಲಿ ಯಾವುದೇ ಬದಲಾವಣೆ ಇಲ್ಲ" ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

 

Category
ಕರಾವಳಿ ತರಂಗಿಣಿ