image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಉಗ್ರ ಕೃತ್ಯದ ಸಂಚು : ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ASI ಸೇರಿ ಮೂವರ ಬಂಧಿಸಿದ NIA

ಉಗ್ರ ಕೃತ್ಯದ ಸಂಚು : ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ASI ಸೇರಿ ಮೂವರ ಬಂಧಿಸಿದ NIA

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಜೈಲಿನಿಂದಲೇ ಕರ್ನಾಟಕ ಸೇರಿ ರಾಷ್ಟ್ರದಾದ್ಯಂತ ಉಗ್ರ ಕೃತ್ಯ ನಡೆಸಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಕೋಲಾರದ ಐದು ಕಡೆ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಅಧಿಕಾರಿಗಳು ಜೈಲಿನ ಮನೋವೈದ್ಯ, ಸಿಎಆರ್ ಪೊಲೀಸ್ ಅಧಿಕಾರಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಪರಪ್ಪನ ಅಗ್ರಹಾರ ಕಾರಾಗೃಹದ ಮನೋವೈದ್ಯ ಡಾ.ನಾಗರಾಜ್, ನಗರ ಸಶಸ್ತ್ರ ಮೀಸಲು ಪಡೆಯ ಎಎಸ್‌ಐ ಚಾಂದ್ ಪಾಷಾ ಮತ್ತು ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಜುನೈದ್ ಅಹ್ಮದ್‌ ಎಂಬಾತನ ತಾಯಿ ಅನೀಸ್ ಫಾತೀಮಾ ಎಂಬವರನ್ನು ಬಂಧಿಸಲಾಗಿದೆ. ದಾಳಿ ವೇಳೆ ಆರೋಪಿಗಳ ಮನೆಯಲ್ಲಿದ್ದ ಡಿಜಿಟಲ್ ದಾಖಲೆಗಳು, ನಗದು, ಚಿನ್ನಾಭರಣ ಹಾಗೂ ಕೃತ್ಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಎನ್ಐಎ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನ ನಾಗನಾಥಪುರದಲ್ಲಿರುವ ವೈದ್ಯ ನಾಗರಾಜ್ ಮನೆ, ಸಿಎಆರ್ ಉತ್ತರ ವಿಭಾಗದಲ್ಲಿರುವ ಚಾಂದ್ ಪಾಷಾ ವಾಸವಾಗಿರುವ ಸಿಎಆರ್ ಕ್ವಾಟ್ರರ್ಸ್, ಕೋಲಾರದಲ್ಲಿರುವ ಮನೆ, ಆರ್.ಟಿ.ನಗರದಲ್ಲಿರುವ ಜುನೈದ್ ಅಹ್ಮದ್ ಮನೆ, ವೈದ್ಯ ನಾಗರಾಜ್‌ಗೆ ಸಹಾಯಕಿಯಾಗಿದ್ದ ಪವಿತ್ರಾ ಎಂಬಾಕೆಯ ಮನೆ ಸೇರಿ ಐದು ಕಡೆ ದಾಳಿ ನಡೆಸಲಾಗಿದೆ.

ಆರೋಪಿಗಳ ಪೈಕಿ ಮನೋವೈದ್ಯ ನಾಗರಾಜ್, ಕಳೆದ ನಾಲ್ಕೈದು ವರ್ಷಗಳಿಂದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮನೋವೈದ್ಯನಾಗಿ ಹೆಚ್ಚುವರಿ ಕೆಲಸ ಮಾಡುತ್ತಿದ್ದರು. ಈತ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಲಷ್ಕರ್-ಎ-ತೊಯ್ಬಾ ಸಂಘಟನೆಯ ದಕ್ಷಿಣ ಭಾರತದ ಮುಖ್ಯಸ್ಥ ಟಿ.ನಾಸೀರ್, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಜುನೈದ್ ಅಹ್ಮದ್ ಹಾಗೂ ಇತರೆ ಕೈದಿಗಳಿಗೆ ಮೊಬೈಲ್‌ಗಳನ್ನು ಕಳ್ಳಸಾಗಣೆ ಮೂಲಕ ನೀಡುತ್ತಿದ್ದ. ಈತನಿಗೆ ಆಕೆಯ ಸಹಾಯಕಿ ಪವಿತ್ರಾ ಎಂಬಾಕೆ ಸಹಾಯ ಮಾಡುತ್ತಿದ್ದಳು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

Category
ಕರಾವಳಿ ತರಂಗಿಣಿ