image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ: 173 ಪ್ರಯಾಣಿಕರು ಪಾರು

ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ: 173 ಪ್ರಯಾಣಿಕರು ಪಾರು

ಡೆನ್ವ‌ರ್: ಡೆನ್ವ‌ರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡರೂ ಅದೃಷ್ಟವಶಾತ್ 173 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಿಯಾಮಿಗೆ ತೆರಳುತ್ತಿದ್ದ ಅಮೇರಿಕನ್ ಏರ್‌ಲೈನ್ಸ್‌ (ಬೋಯಿಂಗ್ 737 MAX 8) ವಿಮಾನವು ಡೆನ್ವ‌ರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆಗುವ ಕೆಲವೇ ಸೆಕೆಂಡುಗಳ ಮೊದಲು ಲ್ಯಾಂಡಿಂಗ್ ಗೇರ್‌ನಲ್ಲಿ ಸಮಸ್ಯೆ ಉಂಟಾದ ಪರಿಣಾಮ ರನ್‌ವೇಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಅಧಿಕಾರಿಗಳು ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಿದ್ದಾರೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆಂದು ವರದಿಯಾಗಿದೆ. ಆದರೆ, ಹೊಗೆ ಮತ್ತು ಬೆಂಕಿಯ ನಡುವೆ ಭಯಭೀತರಾದ ಪ್ರಯಾಣಿಕರು ವಿಮಾನ ತುರ್ತು ನಿರ್ಗಮನ ದ್ವಾರದಿಂದ ಇಳಿಯುತ್ತಿರುವ ದೃಶ್ಯಗಳು ಜನರನ್ನು ಆತಂಕಕ್ಕೆ ದೂಡಿದೆ. ಸ್ಥಳೀಯ ಕಾಲಮಾನದ ಪ್ರಕಾರ ಶನಿವಾರ ಮಧ್ಯಾಹ್ನ 2.45ರ ಸುಮಾರಿಗೆ ಈ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಡೆನ್ವರ್ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ