image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಕರ್ನಾಟಕದಲ್ಲಿ ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ : ಸಂಸದ ಸುಧಾಕರ್ ಆರೋಪ

ಕರ್ನಾಟಕದಲ್ಲಿ ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ : ಸಂಸದ ಸುಧಾಕರ್ ಆರೋಪ

ನವದೆಹಲಿ: ಕರ್ನಾಟಕದಲ್ಲಿ ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕ‌ರ್ ಆರೋಪಿಸಿದರು. ಲೋಕಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, 'ಮುಂಗಾರು ಅವಧಿ ಕೃಷಿಗೆ ನಿರ್ಣಾಯಕ. ಈ ಸಮಯದಲ್ಲಿ ಭತ್ತ, ಜೋಳ, ದ್ವಿದಳಧಾನ್ಯ, ಸೋಯಾಬಿನ್ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಬೆಳೆಯುತ್ತಾರೆ. ದುರದೃಷ್ಟವಶಾತ್ ಜಾಗತಿಕ ಕಲಹದ ನಡುವೆಯೂ ಕೇಂದ್ರದ ಬಿಜೆಪಿ ಸರ್ಕಾರವು ಈ ಹಂಗಾಮಿನಲ್ಲಿ 8.13 ಲಕ್ಷ ಟನ್ ಯೂರಿಯಾವನ್ನು ರಾಜ್ಯಕ್ಕೆ ಕಳುಹಿಸಿದೆ. ಭ್ರಷ್ಟಾಚಾರ ಹಾಗೂ ದುರಾಡಳಿತವನ್ನೇ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಅಸಮರ್ಪಕ ಆಡಳಿತದಿಂದ ರೈತರಿಗೆ ಭಾರಿ ತೊಂದರೆ ಆಗಿದೆ' ಎಂದು ಗಮನ ಸೆಳೆದರು.

'ರಾಜ್ಯದಲ್ಲಿ ದಾಸ್ತಾನು ಇದ್ದರೂ ಯೂರಿಯಾ ಹಾಗೂ ಡಿಎಪಿ ಹಂಚಿಕೆ ಮಾಡಿಲ್ಲ. ಈ ಮೂಲಕ ರೈತರಿಗೆ ಅನ್ಯಾಯ ಮಾಡಿದೆ. ರಾಜ್ಯದಲ್ಲಿ ₹258ಕ್ಕೆ ಸಬ್ಸಿಡಿ ಯೂರಿಯಾ ಸಿಗಬೇಕಿತ್ತು. ₹500 ಕ್ಕೆ ಮಾರಾಟ ಮಾಡಲಾಗುತ್ತಿದೆ. ಡಿಎಪಿಯನ್ನು ₹ 1200 ಬದಲು ₹2000ಕ್ಕೆ ಮಾರಲಾಗುತ್ತಿದೆ. ಕೇಂದ್ರ ಸರ್ಕಾರವು ಮಧ್ಯ ಪ್ರವೇಶ ಮಾಡಿ ಸಮರ್ಪಕ ರಸಗೊಬ್ಬರ ಪೂರೈಕೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ಕೊಡಬೇಕು' ಎಂದು ಅವರು ಆಗ್ರಹಿಸಿದರು.

Category
ಕರಾವಳಿ ತರಂಗಿಣಿ