image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಉಪರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್​ 9ರಂದು ಚುನಾವಣೆ

ಉಪರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್​ 9ರಂದು ಚುನಾವಣೆ

ನವದೆಹಲಿ: ಜಗದೀಪ್​ ಧಂಖರ್​ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾಗಿರುವ ಉಪರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್​ 9ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.

ಆಗಸ್ಟ್​ 7ರಂದು ಚುನಾವಣೆಗೆ ಅಧಿಸೂಚನೆ, ನಾಮಪತ್ರ ಸಲ್ಲಿಸಲು ಆಗಸ್ಟ್​ 12 ಕೊನೆಯ ದಿನ, ಆಗಸ್ಟ್​ 22ರಂದು ನಾಮಪತ್ರಗಳ ಪರಿಶೀಲನೆ, ಆಗಸ್ಟ್​ 25ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ, ಸೆಪ್ಟೆಂಬರ್​ 9ರಂದು ಬೆಳಗ್ಗೆ 10ರಿಂದ ಸಂಜೆ 5ರವೆರೆಗೆ ಮತದಾನ, ಅಂದೇ ಮತ ಎಣಿಕೆ, ಫಲಿತಾಂಶ ಘೋಷಣೆ.

ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಸಲು ಸಂವಿಧಾನದ ವಿಧಿ 324ರ ಅಡಿಯಲ್ಲಿ ಭಾರತೀಯ ಚುನಾವಣಾ ಆಯೋಗಕ್ಕೆ ಅಧಿಕಾರವಿದೆ. ವಿಧಿ 66(1)ರ ಪ್ರಕಾರ, ಉಪರಾಷ್ಟ್ರಪತಿಯನ್ನು ರಾಜ್ಯಸಭೆಯ ಚುನಾಯಿತ ಸದಸ್ಯರು, ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರು ಮತ್ತು ಲೋಕಸಭೆಯ ಚುನಾಯಿತ ಸದಸ್ಯರನ್ನು ಒಳಗೊಂಡ 'ಚುನಾವಣಾ ಕಾಲೇಜ್​' ಆಯ್ಕೆ ಮಾಡುತ್ತದೆ.

Category
ಕರಾವಳಿ ತರಂಗಿಣಿ