image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ: ಒಬ್ಬ ಉಗ್ರನ ಹತ್ಯೆ

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ: ಒಬ್ಬ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರ : ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ತಿಳಿಸಿದೆ. ಕುಲ್ಗಾಮ್​​ನ ಅಖಾಲ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿಯಿಡೀ ತೀವ್ರ ಗುಂಡಿನ ಚಕಮಕಿ ಮುಂದುವರೆಯಿತು. ಎನ್​ಕೌಂಟರ್​ನಲ್ಲಿ ಭದ್ರತಾ ಪಡೆಗಳು ಇದುವರೆಗೆ ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿವೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಶನಿವಾರ ಬೆಳಗ್ಗೆ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ. ಸೇನೆಯ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ನಡೆಸುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಶುಕ್ರವಾರ ಸಂಜೆ ಪ್ರಾರಂಭವಾಯಿತು. ಕುಲ್ಗಾಮ್‌ನ ಅಖಾಲ್‌ ಪ್ರದೇಶದಲ್ಲಿ ಎನ್​​ಕೌಂಟರ್​​ ನಡೆಯುತ್ತಿದೆ. ಜಂಟಿ ಕಾರ್ಯಾಚರಣೆಯು ಪ್ರಗತಿಯಲ್ಲಿದೆ ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿತ್ತು.

ಜಮ್ಮುವಿನ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ್ದೇವೆ ಎಂದು ಸೇನೆ ಹೇಳಿದ ಎರಡು ದಿನಗಳ ಬೆನ್ನಲ್ಲೇ, ಈ ಗುಂಡಿನ ಚಕಮಕಿ ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರು. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಜುಲೈ 28ರಂದು ಶ್ರೀನಗರದ ಮೇಲ್ಭಾಗದಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು. ಇದೀಗ, ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಹಿನ್ನೆಲೆಯಲ್ಲಿ, ಮತ್ತೆ ಎನ್​ಕೌಂಟರ್​ ನಡೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಸಾವು-ನೋವುಗಳಲ್ಲಿ ಜುಲೈನಲ್ಲಿ ಅಲ್ಪ ಏರಿಕೆ ಕಂಡುಬಂದಿದೆ ಎಂದು ಅಂಕಿ-ಅಂಶಗಳಿಂದ ತಿಳಿದುಬಂದಿದೆ. ಐವರು ಭಯೋತ್ಪಾದಕರು ಮತ್ತು ಒಬ್ಬ ಭದ್ರತಾ ಪಡೆ ಸಿಬ್ಬಂದಿ ಸೇರಿದಂತೆ ಆರು ಸಾವುಗಳು ಕೇಂದ್ರಾಡಳಿತ ಪ್ರದೇಶದಲ್ಲಿ ವರದಿಯಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Category
ಕರಾವಳಿ ತರಂಗಿಣಿ