ನವದೆಹಲಿ: ಅದಾನಿ ವಿರುದ್ಧ ಅಮೆರಿಕದಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ, ಡೊನಾಲ್ಡ್ ಟ್ರಂಪ್ ಪದೇ ಪದೇ ಬೆದರಿಕೆ ಒಡ್ಡುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಪಾದಿಸಿದ್ದಾರೆ. ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳಲು ಮುಂದಾಗಿರುವುದರಿಂದ ಮುಂದಿನ 24 ಗಂಟೆಯಲ್ಲಿ ಭಾರತದ ಮೇಲೆ ಹೇರಿರುವ ತೆರಿಗೆಯನ್ನು ಗಣನೀಯವಾಗಿ ಏರಿಸಲಾಗುವುದು ಎಂದು ಡೊನಾಲ್ಡ್ ಟ್ರಂಪ್ ಹೇಳಿದ ಬೆನ್ನಲ್ಲೇ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದು ಮತ್ತೊಮ್ಮೆ ಅಚ್ಚರಿ ಮೂಡಿಸಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ 'ಭಾರತೀಯರು ದಯವಿಟ್ಟು ಅರ್ಥ ಮಾಡಿಕೊಳ್ಳಿ, ಡೊನಾಲ್ಡ್ ಟ್ರಂಪ್ ಪದೇ ಪದೇ ಬೆದರಿಕೆ ಹಾಕುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಸುಮ್ಮನಿರುವುದಕ್ಕೆ ಕಾರಣ ಅಮೆರಿಕದಲ್ಲಿ ಅದಾನಿ ವಿರುದ್ಧ ನಡೆಯುತ್ತಿರುವ ತನಿಖೆ' ಎಂದು ಬರೆದುಕೊಂಡಿದ್ದಾರೆ. ಮೋದಿ, ಎಎ ಹಾಗೂ ರಷ್ಯಾದ ತೈಲ ಒಪ್ಪಂದದ ನಡುವೆ ಇರುವ ಹಣಕಾಸು ಸಂಬಂಧವನ್ನು ಬಹಿರಂಗ ಪಡಿಸುವ ಬೆದರಿಕೆ ಅದರಲ್ಲಿ ಒಂದು. ಮೋದಿಯವರ ಕೈಗಳನ್ನು ಕಟ್ಟಿ ಹಾಕಲಾಗಿದೆ' ಎಂದು ಬರೆದುಕೊಂಡಿದ್ದಾರೆ.