ಇಂಡಿಯಾನ - ಅಮೇರಿಕಾದ ಇಂಡಿಯಾನ ರಾಜ್ಯದ ಗ್ರೀನ್‌ವುಡ್‌ನಲ್ಲಿರುವ ಶ್ರೀ 'ಬೋಚಾಸನವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ'ಯ (ಬಿ.ಎ.ಪಿ.ಎಸ್) ಸ್ವಾಮಿನಾರಾಯಣ ದೇವಸ್ಥಾನವನ್ನು ಮತ್ತೆ ಧ್ವಂಸ ಮಾಡಲಾಗಿದೆ. ಸಮಾಜ ವಿರೋಧಿ ಶಕ್ತಿಗಳು ದೇವಸ್ಥಾನದ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆದಿದ್ದಾರೆ. ಕಳೆದ ಒಂದು ವರ್ಷದಲ್ಲಿ ಈ ದೇವಸ್ಥಾನದ ಮೇಲೆ ನಡೆದ ನಾಲ್ಕನೇ ದಾಳಿ ಇದಾಗಿದೆ. ಈ ಘಟನೆಯಿಂದ ಹಿಂದೂಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕಾಗೋದ ಭಾರತೀಯ ವಾಣಿಜ್ಯ ರಾಯಭಾರಿ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದೆ ಮತ್ತು ಆರೋಪಿಗಳ ವಿರುದ್ಧ ತಕ್ಷಣವೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ.
' ಹಿಂದೂ ಅಮೇರಿಕನ್ ಫೌಂಡೇಶನ್' ಈ ಘಟನೆಯ ಫೋಟೋವನ್ನು ಬಿಡುಗಡೆ ಮಾಡಿ, ಇದು ಖಲಿಸ್ತಾನಿ ಬೆಂಬಲಿಗರ ಕೃತ್ಯ ಎಂದು ಹೇಳಿದೆ. 'ಬಿ.ಎ.ಪಿ.ಎಸ್'ನ ಸಾರ್ವಜನಿಕ ವ್ಯವಹಾರಗಳ ವಿಭಾಗವು ಇದು ಹಿಂದೂ ದ್ವೇಷದ ಕೃತ್ಯ ಎಂದು ಹೇಳಿದ್ದು, ಇದರ ವಿರುದ್ಧ ಒಗ್ಗಟ್ಟಾಗಿ ನಿಲ್ಲುವ ಸಮಯ ಬಂದಿದೆ ಎಂದಿದೆ. ಪ್ರಸ್ತುತ ಅಮೇರಿಕಾದಲ್ಲಿ ಹಿಂದೂ ದೇವಸ್ಥಾನಗಳ ಮೇಲಿನ ದಾಳಿಗಳು ಹೆಚ್ಚುತ್ತಿವೆ. (ಇದರಿಂದ ಪಾಕಿಸ್ತಾನ್ ಬೆಂಬಲಿತ ಖಲಿಸ್ತಾನಿ ಭಯೋತ್ಪಾದಕರಿಗೆ ಅಮೇರಿಕಾ ಕುಮ್ಮಕ್ಕು ನೀಡುತ್ತಿದೆ ಎಂಬುದು ಸ್ಪಷ್ಟವಾಗಿದೆ! ಅಪರಾಧಿಗಳ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ದೇವಸ್ಥಾನಗಳ ಭದ್ರತೆಯನ್ನು ಹೆಚ್ಚಿಸುವಂತೆ ಹಿಂದೂ ಸಂಸ್ಥೆಗಳು ಅಮೇರಿಕಾ ಸರ್ಕಾರಕ್ಕೆ ಒತ್ತಾಯಿಸಿವೆ. ಶ್ರೀಕೃಷ್ಣ ಜನ್ಮಾಷ್ಟಮಿಯ ಮೊದಲು ನಡೆದ ಈ ದಾಳಿಯು ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಭಾರತೀಯರು ಆಕ್ರೋಶ ವ್ಯಕ್ತ ಪಡಿಸಿದರು.