image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಲು ಎದುರು ನೋಡುತ್ತಿರುವುದಾಗಿ ಹೇಳಿಕೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ !

ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಲು ಎದುರು ನೋಡುತ್ತಿರುವುದಾಗಿ ಹೇಳಿಕೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ !

ಅಮೇರಿಕ : ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕಾಗಿ ಭಾರತದ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ್ದ ಅಮೆರಿಕ ಈಗ ಮತ್ತೆ ಭಾರತದೆಡೆಗೆ ತನ್ನ ಮೃದು ಧೋರಣೆ ತೋರುವ ಪ್ರಯತ್ನ ಮಾಡುತ್ತಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಲು ಎದುರು ನೋಡುತ್ತಿರುವುದಾಗಿ ಹೇಳಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ ಮೋದಿ ಪ್ರತಿಕ್ರಿಯೆಯನ್ನು ನೀಡಿದ್ದು, ಭಾರತ ಮತ್ತು ಅಮೆರಿಕ ಮೊದಲಿನಿಂದ ಪಾಲುದಾರರು ಎಂದು ಕರೆದಿದ್ದಾರೆ. ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ನವದೆಹಲಿಯ ಮೇಲೆ ವಾಷಿಂಗ್ಟನ್ ವಿಧಿಸಿದ ಶೇ. 50ರಷ್ಟು ದಂಡ ಹಾಗೂ ಭಾರತದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾತುಗಳು ಕಳೆದ ಕೆಲವು ತಿಂಗಳುಗಳಲ್ಲಿ ಎರಡು ರಾಷ್ಟ್ರಗಳ ಸಂಬಂಧಗಳ ಮೇಲೆ ಪರಿಣಾಮ ಬೀರಿತ್ತು.ಈ ನಡುವೆ ಇದೀಗ ಭಾರತದೊಂದಿಗೆ ಮಾತುಕತೆಗೆ ಸಿದ್ದ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ಭಾರತ ಮತ್ತು ಅಮೆರಿಕ ನೈಸರ್ಗಿಕ ಪಾಲುದಾರರು ಎಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಟ್ರಂಪ್ ಅವರ ಪೋಸ್ಟ್ ಗೆ ಸಮಾಧಾನಕರ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಭಾರತೀಯ ನಾಯಕ ಮೋದಿ ಅವರನ್ನು ಆತ್ಮೀಯ ಸ್ನೇಹಿತ ಎಂದು ಕರೆದಿರುವ ಟ್ರಂಪ್, ಸ್ಥಗಿತಗೊಂಡ ವ್ಯಾಪಾರ ಮಾತುಕತೆಗಳಿಗೆ ಹೊಸ ದಾರಿಯನ್ನು ತೆರೆಯುವ ಪ್ರಯತ್ನ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಮೋದಿ, ಭಾರತ ಮತ್ತು ಅಮೆರಿಕ ಆಪ್ತ ಸ್ನೇಹಿತರು ಮತ್ತು ನೈಸರ್ಗಿಕ ಪಾಲುದಾರರು. ನಮ್ಮ ವ್ಯಾಪಾರ ಮಾತುಕತೆಗಳು ಭಾರತ- ಅಮೆರಿಕ ಪಾಲುದಾರಿಕೆಯ ಅಪರಿಮಿತ ಸಾಮರ್ಥ್ಯವನ್ನು ಅನ್ಲಾಕ್ ಮಾಡಲು ದಾರಿ ಮಾಡಿಕೊಡುತ್ತವೆ ಎನ್ನುವ ವಿಶ್ವಾಸವಿದ್ದು, ಇದು ಆದಷ್ಟು ಬೇಗ ಮುಗಿಯಲಿದೆ. ಇದನ್ನು ನಮ್ಮ ತಂಡಗಳು ಮಾಡುತ್ತಿವೆ ಎಂದು ಹೇಳಿದ್ದಾರೆ. 

ಭಾರತ ತಾಳ್ಮೆಯನ್ನು ಕಾಯ್ದುಕೊಂಡಿದ್ದು, ಇದರಿಂದ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವು ಸಮತೋಲನದಲ್ಲಿದೆ. ಕೃಷಿ ಮತ್ತು ಡೈರಿ ಮಾರುಕಟ್ಟೆಗಳಿಗೆ ವ್ಯಾಪಕ ಪ್ರವೇಶವನ್ನು ಅಮೆರಿಕ ಬಯಸುತ್ತದೆ ಎನ್ನಲಾಗುತ್ತಿದೆ. ತಿಂಗಳ ಆರಂಭದಲ್ಲಿ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ಫೋಟೋಗಳಲ್ಲಿ ಪ್ರಧಾನಿ ಮೋದಿ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನೋಡಿದ ಮೇಲೆ ಟ್ರಂಪ್ ಇದನ್ನು ಟೀಕಿಸಿದ್ದರು. ಆದರೆ ಇದೀಗಾ ಮತ್ತೆ ಅವರು ತಮ್ಮ ಮೃದು ಧೋರಣೆಯನ್ನು ತಾಳಿ ಭಾರತದೊಂದಿಗಿನ ಸಂಬಂಧಗಳನ್ನು ವಿಶೇಷ ಎಂದು ಬಣ್ಣಿಸಿದ್ದಾರೆ.

Category
ಕರಾವಳಿ ತರಂಗಿಣಿ