image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ನೌಕಾಪಡೆಯ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

ನೌಕಾಪಡೆಯ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

ಪಣಜಿ:  ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಹಬ್ಬವನ್ನು ನೌಕಾಪಡೆಯ ಯೋಧರೊಂದಿಗೆ ಆಚರಿಸಿದ್ದಾರೆ. ಗೋವಾದ ಕರಾವಳಿಯಲ್ಲಿ ಐಎನ್‌ಎಸ್ ವಿಕ್ರಾಂತ್‌ ಯುದ್ಧನೌಕೆಯಲ್ಲಿ ಯೋಧರೊಂದಿಗೆ ಸಂವಾದ ನಡೆಸಿದ ಮೋದಿ, ಅವರೊಂದಿಗೆ ದೀಪಾವಳಿ ಹಬ್ಬವನ್ನು ಸಂಭ್ರಮಿಸಿದ್ದಾರೆ. ಪ್ರತಿಯೊಬ್ಬರು ತಮ್ಮ ಕುಟುಂಬದೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಲು ಬಯಸುತ್ತಾರೆ. ನೀವು ನನ್ನ ಕುಟುಂಬವಿದ್ದಂತೆ. ನಿಮ್ಮೊಂದಿಗೆ ಈ ಹಬ್ಬವನ್ನು ಆಚರಿಸುತ್ತಿರುವುದು ಅತೀವ ಸಂತಸ ತಂದಿದೆ. ನಾನು ನಿಮ್ಮೊಂದಿಗೆ ಉತ್ತಮ ಸಮಯವನ್ನು ಕಳೆದಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಸ್ವದೇಶಿ ನಿರ್ಮಿತ ಐಎನ್‌ಎಸ್ ವಿಕ್ರಾಂತ್‌ನನ್ನು (ಯುದ್ಧನೌಕೆ) ದೇಶಕ್ಕೆ ಹಸ್ತಾಂತರಿಸುವಾಗ ವಿಕ್ರಾಂತ್ ವಿಶಾಲ, ಅಗಾಧ ಮತ್ತು ಭವ್ಯವಾದದ್ದು ಎಂದು ಹೇಳಿದ್ದೆ. ಇದು ಕೇವಲ ಯುದ್ಧನೌಕೆಯಲ್ಲ 21 ನೇ ಶತಮಾನದಲ್ಲಿ ಭಾರತದ ಕಠಿಣ ಪರಿಶ್ರಮ, ಪ್ರತಿಭೆ, ಸಾಮರ್ಥ್ಯ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ ಎಂದಿದ್ದಾರೆ. ನಾನು ಮಿಲಿಟರಿ ಉಪಕರಣಗಳ ಗಮನಿಸುತ್ತಿದ್ದೆ. ಈ ದೊಡ್ಡ ಹಡಗುಗಳು, ಗಾಳಿಗಿಂತ ವೇಗವಾಗಿ ಚಲಿಸುವ ವಿಮಾನಗಳು, ಜಲಾಂತರ್ಗಾಮಿ ನೌಕೆಗಳು ಪ್ರಭಾವಶಾಲಿಯಾಗಿವೆ, ಆದರೆ ಅವುಗಳನ್ನು ನಿಜವಾಗಿಯೂ ಪ್ರಭಾವಶಾಲಿಯಾನ್ನಾಗಿಸಿರುವುದು ಯೋಧರ ಧೈರ್ಯ ಎಂದಿದ್ದಾರೆ. ಆಪರೇಷನ್‌ ಸಿಂಧೂರದ ವೇಳೆ ಯೋಧರು ತೋರಿದ ಧೈರ್ಯ, ಸಾಹಸವನ್ನು ಮೋದಿ ಪ್ರಶಂಸಿಸಿದ್ದಾರೆ.

Category
ಕರಾವಳಿ ತರಂಗಿಣಿ