image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ರಾಷ್ಟ್ರೀಯ ಗೀತೆ 'ವಂದೇ ಮಾತರಂ'ಗೆ 150 ವರ್ಷಗಳು ಪೂರ್ಣವಾಗಿರುವ ಹಿನ್ನೆಲೆ, 'ವಂದೇ ಮಾತರಂ' ಥೀಮ್‌ನಲ್ಲಿ ಗಣರಾಜ್ಯೋತ್ಸವ

ರಾಷ್ಟ್ರೀಯ ಗೀತೆ 'ವಂದೇ ಮಾತರಂ'ಗೆ 150 ವರ್ಷಗಳು ಪೂರ್ಣವಾಗಿರುವ ಹಿನ್ನೆಲೆ, 'ವಂದೇ ಮಾತರಂ' ಥೀಮ್‌ನಲ್ಲಿ ಗಣರಾಜ್ಯೋತ್ಸವ

ನವದೆಹಲಿ: ರಾಷ್ಟ್ರೀಯ ಗೀತೆ 'ವಂದೇ ಮಾತರಂ'ಗೆ 150 ವರ್ಷಗಳು ಪೂರ್ಣವಾಗಿರುವ ಹಿನ್ನೆಲೆಯಲ್ಲಿ ಈ ವರ್ಷದ ಗಣರಾಜ್ಯ ದಿನವನ್ನು ಇದೇ ಥೀಮ್‌ನಲ್ಲಿ ರೂಪಿಸಲಾಗಿದೆ. ಕರ್ತವ್ಯ ಪಥದುದ್ದಕ್ಕೂ ಗೀತೆಯ ಆರಂಭಿಕ ಚರಣಗಳನ್ನು ವಿವರಿಸುವ ವರ್ಣಚಿತ್ರ ಪ್ರದರ್ಶಿಸಲಾಗುತ್ತದೆ. ಕವಿ ಬಂಕಿಮ ಚಂದ್ರ ಚಟರ್ಜಿಯವರಿಗೆ ಗೌರವ ಸಲ್ಲಿಸುವಂತೆ ಮುಖ್ಯ ವೇದಿಕೆಯನ್ನು ಅಲಂಕರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರೇಡ್‌ ಸ್ಥಳದ ಸುತ್ತಲಿನ ಆವರಣದಲ್ಲಿ ಈ ಹಿಂದಿನಂತೆ 'ವಿವಿಐಪಿ' ಮತ್ತು ಇತರ ಲೇಬಲ್‌ಗಳನ್ನು ಬಳಸಲಾಗುವುದಿಲ್ಲ. ಬದಲಾಗಿ, ಭಾರತೀಯ ನದಿಗಳ ಹೆಸರಿಡಲಾಗಿದೆ. ಕಾರ್ಯಕ್ರಮದ ಆಹ್ವಾನ ಪತ್ರದಲ್ಲಿ ವಂದೇ ಮಾತರಂ ಲೋಗೊ ಮುದ್ರಿಸಲಾಗಿದೆ. ಪರೇಡ್‌ನ ಕೊನೆಯಲ್ಲಿ ಗೀತೆಯ ಥೀಮ್ ಹೊಂದಿರುವ ಬ್ಯಾನರ್ ಹೊತ್ತ ಬಲೂನ್‌ಗಳನ್ನು ಆಕಾಶದಲ್ಲಿ ಹಾರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಜ.19ರಿಂದ 26ರವರೆಗೆ 120ಕ್ಕೂ ಹೆಚ್ಚು ನಗರಗಳ 235 ಸ್ಥಳಗಳಲ್ಲಿ 'ವಂದೇ ಮಾತರಂ' ವಿಷಯದ ಮೇಲೆ ಸೈನ್ಯ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಬ್ಯಾಂಡ್ ಪ್ರದರ್ಶನಗಳು ನಡೆಯಲಿವೆ. ಕರ್ತವ್ಯ ಪಥದಲ್ಲಿ ತೇಜೇಂದ್ರ ಕುಮಾರ್‌ ಮಿತ್ರ ರಚಿಸಿದ ವಂದೇ ಮಾತರಂ ಕುರಿತಾದ ವರ್ಣಚಿತ್ರಗಳನ್ನು ಪ್ರದರ್ಶಿಲಾಗುವುದು. ಈ ಚಿತ್ರಗಳನ್ನು 1923ರಲ್ಲಿ ಪ್ರಕಟಿಸಲಾಗಿತ್ತು ಎಂದಿದ್ದಾರೆ.

Category
ಕರಾವಳಿ ತರಂಗಿಣಿ