image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರಲ್ಹಾದ್ ಜೋಶಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರಲ್ಹಾದ್ ಜೋಶಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಲಹೆಯಂತೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ.

ರಾಷ್ಟ್ರಪತಿ ಭವನ ಹೊರಡಿಸಿರುವ ಅಧಿಕೃತ ಪ್ರಕಟಣೆಯ ಪ್ರಕಾರ, ಭಾರತೀಯ ಸಂವಿಧಾನದ 75ನೇ ವಿಧಿಯ ಷರತ್ತು (2) ರ ಅಡಿಯಲ್ಲಿ ಕೇಂದ್ರ ಸಂಪುಟಕ್ಕೆ ಸಲ್ಲಿಸಲಾಗಿದ್ದ ಪ್ರಧಾನ್ ಅವರ ರಾಜೀನಾಮೆಯನ್ನು ಸ್ವೀಕರಿಸಲಾಗಿದೆ. ಕನ್ನಡಿಗರಾದ ಪ್ರಲ್ಹಾದ್ ಜೋಶಿ ಅವರು ತಾವು ಪ್ರಸ್ತುತ ನಿರ್ವಹಿಸುತ್ತಿರುವ ಖಾತೆಗಳ (ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಸಚಿವಾಲಯ) ಜೊತೆಗೆ ಇನ್ಮುಂದೆ ಶಿಕ್ಷಣ ಸಚಿವಾಲಯದ ಜವಾಬ್ದಾರಿಯನ್ನೂ ನಿರ್ವಹಿಸಲಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಶಿಕ್ಷಣ ಇಲಾಖೆಯ ಹೊಣೆಗಾರಿಕೆ ಪ್ರಲ್ಹಾದ್ ಜೋಶಿ ಅವರ ಹೆಗಲೇರಿದೆ.

Category
ಕರಾವಳಿ ತರಂಗಿಣಿ