image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಜಾರ್ಖಂಡ್‌ನಲ್ಲಿ 22 ನೇಮಕಾತಿ ಪರೀಕ್ಷೆಗಳು ರದ್ದು: ವಿದ್ಯಾರ್ಥಿಗಳ ಹೋರಾಟ ಯಶಸ್ಸು

ಜಾರ್ಖಂಡ್‌ನಲ್ಲಿ 22 ನೇಮಕಾತಿ ಪರೀಕ್ಷೆಗಳು ರದ್ದು: ವಿದ್ಯಾರ್ಥಿಗಳ ಹೋರಾಟ ಯಶಸ್ಸು

ರಾಂಚಿ: ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮ ಹಾಗೂ ಅವ್ಯವಹಾರಗಳನ್ನು ಖಂಡಿಸಿ ಜಾರ್ಖಂಡ್‌ನಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿದ್ದ ಸುದೀರ್ಘ ಹೋರಾಟಕ್ಕೆ ಮಹತ್ವದ ತಿರುವು ಸಿಕ್ಕಿದೆ. JPSC ಹಾಗೂ JSSC ಅಭ್ಯರ್ಥಿಗಳು ಸತತ 26 ದಿನಗಳ ಕಾಲ ನಡೆಸಿದ ಪ್ರತಿಭಟನೆಯ ಫಲವಾಗಿ, ರಾಜ್ಯ ಸರ್ಕಾರವು 22 ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸಿ, ಹಲವು ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ನೇಮಕಾತಿ ಅಕ್ರಮಗಳ ನಿಷ್ಪಕ್ಷಪಾತ ತನಿಖೆ ಹಾಗೂ ವಿವಾದಕ್ಕೊಳಗಾದ JSSC-CGL ಸೇರಿದಂತೆ ವಿವಿಧ ಪರೀಕ್ಷೆಗಳನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಜುಲೈ 25 ರಿಂದ ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ಧರಣಿ ನಡೆಸುತ್ತಿದ್ದರು. ಉದ್ಯೋಗಾಕಾಂಕ್ಷಿಗಳ ಪ್ರಮುಖ ಬೇಡಿಕೆಗಳಿಗೆ ಸ್ಪಂದಿಸಿದ ಜಾರ್ಖಂಡ್ ಸರ್ಕಾರವು 22 ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸುವ ಪ್ರಮುಖ ನಿರ್ಧಾರ ಕೈಗೊಂಡಿದ್ದು, 23 ಇತರೆ ಪರೀಕ್ಷೆಗಳ ಅಕ್ರಮಗಳ ಕುರಿತು ತನಿಖೆಗೆ ಆದೇಶಿಸಿದೆ. ಇದರೊಂದಿಗೆ 2014 ರಿಂದ ನಡೆದ ನೇಮಕಾತಿ ಪ್ರಕ್ರಿಯೆಗಳನ್ನೂ ಪರಿಶೀಲಿಸಲು ತೀರ್ಮಾನಿಸಲಾಗಿದೆ. ಸರ್ಕಾರದ ಈ ನಿರ್ಧಾರದ ನಂತರ ವಿದ್ಯಾರ್ಥಿಗಳು ತಮ್ಮ ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ತನಿಖೆ ಮತ್ತು ಸುಧಾರಣೆಗಳಿಗಾಗಿ ಸರ್ಕಾರಕ್ಕೆ ಎರಡು ತಿಂಗಳ ಗಡುವು ನೀಡಿದ್ದಾರೆ.

ಇದೇ ವೇಳೆ, ಪರೀಕ್ಷೆ ರದ್ದತಿಯಿಂದ ಈಗಾಗಲೇ ಉದ್ಯೋಗ ಪಡೆದುಕೊಂಡಿದ್ದ ಅಭ್ಯರ್ಥಿಗಳಲ್ಲಿ ಆತಂಕ ಹಾಗೂ ಅಸಮಾಧಾನ ವ್ಯಕ್ತವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಹೈಕೋರ್ಟ್ 11ನೇ ಮತ್ತು 13ನೇ JPSC ಪರೀಕ್ಷೆಗಳ ಆಧಾರದ ಮೇಲಿನ ನೇಮಕಾತಿ ರದ್ದತಿಗೆ ತಡೆಯಾಜ್ಞೆ ನೀಡಿದ್ದು, ಸುಮಾರು 450 ಅಭ್ಯರ್ಥಿಗಳಿಗೆ ತಾತ್ಕಾಲಿಕ ಪರಿಹಾರ ದೊರೆತಿದೆ. ಈ ಅರ್ಜಿಗಳ ಮುಂದಿನ ವಿಚಾರಣೆ ಸೆಪ್ಟೆಂಬರ್ 15ಕ್ಕೆ ನಿಗದಿಯಾಗಿದ್ದು, ಜಾರ್ಖಂಡ್‌ನಲ್ಲಿ ಪರೀಕ್ಷೆಗಳ ವಿಶ್ವಾಸಾರ್ಹತೆ ಹಾಗೂ ನೇಮಕಗೊಂಡ ಅಭ್ಯರ್ಥಿಗಳ ಭವಿಷ್ಯದ ಕುರಿತು ಚರ್ಚೆ ಮತ್ತಷ್ಟು ತೀವ್ರಗೊಂಡಿದೆ.

Category
ಕರಾವಳಿ ತರಂಗಿಣಿ