image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಐಎಸ್​ಐ ಬೆಂಬಲಿತ ಶಹಜಾದ್ ಭಟ್ಟಿ ನೆಟ್‌ವರ್ಕ್ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ ನಿಷೇಧಿಸಿದ ಕೇಂದ್ರ ಗೃಹ ಸಚಿವಾಲಯ

ಐಎಸ್​ಐ ಬೆಂಬಲಿತ ಶಹಜಾದ್ ಭಟ್ಟಿ ನೆಟ್‌ವರ್ಕ್ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ ನಿಷೇಧಿಸಿದ ಕೇಂದ್ರ ಗೃಹ ಸಚಿವಾಲಯ

ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​ಐ (ISI) ಬೆಂಬಲಿತ 'ಶಹಜಾದ್ ಭಟ್ಟಿ ನೆಟ್‌ವರ್ಕ್' (SBN) ಅನ್ನು ಕೇಂದ್ರ ಗೃಹ ಸಚಿವಾಲಯವು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ ನಿಷೇಧಿಸಿದೆ.

ಈ ಸಿಂಡಿಕೇಟ್ ಗಡಿಯಾಚೆಯಿಂದ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಹಾಗೂ ಮಾದಕವಸ್ತುಗಳನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದು, ದೇಶದ ಯುವಕರು ಮತ್ತು ಸಣ್ಣಪುಟ್ಟ ಅಪರಾಧಿಗಳನ್ನು ದಾರಿ ತಪ್ಪಿಸಿ ಉಗ್ರ ಕೃತ್ಯಗಳಿಗೆ ಬಳಸಿಕೊಳ್ಳುತ್ತಿತ್ತು. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ, ಕೋಮು ಸೌಹಾರ್ದತೆ ಮತ್ತು ಆಂತರಿಕ ಭದ್ರತೆಗೆ ಗಂಭೀರ ಬೆದರಿಕೆ ಒಡ್ಡುತ್ತಿರುವ ಹಿನ್ನೆಲೆಯಲ್ಲಿ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ.

ಭಯೋತ್ಪಾದನೆಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರ 'ಶೂನ್ಯ ಸಹಿಷ್ಣುತೆ' (Zero Tolerance) ನೀತಿಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ 'ಎಕ್ಸ್' ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಗುಂಪು ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ ಹಾಗೂ ಪ್ರಚೋದನಾಕಾರಿ ಸಂದೇಶಗಳನ್ನು ಹಂಚಿಕೊಳ್ಳುವ ಮೂಲಕ ದೇಶದ ಶಾಂತಿ-ಸೌಹಾರ್ದತೆಯನ್ನು ಹಾಳುಮಾಡಲು ಯತ್ನಿಸುತ್ತಿತ್ತು ಎಂದು ಅವರು ತಿಳಿಸಿದ್ದಾರೆ. UAPA ಕಾಯ್ದೆಯಡಿ ಈ ಸಂಘಟನೆಯನ್ನು ನಿಷೇಧಿತ ಪಟ್ಟಿಗೆ ಸೇರಿಸಲಾಗಿದ್ದು, ಗಡಿಪಾರಿನಿಂದ ಹಿಡಿದು ದೇಶದೊಳಗಿನ ಬೆಂಬಲಿಗರ ವಿರುದ್ಧ ತನಿಖಾ ಸಂಸ್ಥೆಗಳು ಕಠಿಣ ಐನ್ ಕ್ರಮ ಕೈಗೊಳ್ಳಲಿವೆ.

Category
ಕರಾವಳಿ ತರಂಗಿಣಿ