image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಟಿಎಂಸಿ ಹಾಗೂ ಸಿಜೆಪಿ ಒತ್ತಾಯ

ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಟಿಎಂಸಿ ಹಾಗೂ ಸಿಜೆಪಿ ಒತ್ತಾಯ

ನವದೆಹಲಿ: ಕಳಂಕಿತ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಕಾಕ್ರೋಚ್ ಜನತಾ ಪಕ್ಷದಿಂದ (ಸಿಜೆಪಿ) ಮಾತ್ರ ಸಾಧ್ಯ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ. ವಿರೋಧ ಪಕ್ಷಗಳ ಮಿತಿಗಳನ್ನು ಒತ್ತಿ ಹೇಳಿದ ಅವರು, ಸಿಜೆಪಿ ಈ ವಿಷಯವನ್ನು ಸವಾಲಾಗಿ ಸ್ವೀಕರಿಸಿ ಹೋರಾಟಕ್ಕೆ ಮುಂದಾದರೆ ಮಾತ್ರ ಶೀಘ್ರ ಫಲಿತಾಂಶ ಸಿಗಲಿದ್ದು, ಈ ವಿವಾದಕ್ಕೆ ತಕ್ಷಣವೇ ತೆರೆಬೀಳಲಿದೆ ಎಂದಿದ್ದಾರೆ. ನೀಟ್ ಸೇರಿದಂತೆ ವಿವಿಧ ರಾಷ್ಟ್ರೀಯ ಪರೀಕ್ಷೆಗಳ ಅಕ್ರಮದ ವಿರುದ್ಧ ಸಿಜೆಪಿ ನಡೆಸಿದ ತೀವ್ರ ಹೋರಾಟದ ಫಲವಾಗಿಯೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕಾಯಿತು ಎಂಬುದನ್ನು ಅವರು ನೆನಪಿಸಿದ್ದಾರೆ.

ಕಾನೂನುಬಾಹಿರವಾಗಿ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡ ಆರೋಪ ಹೊತ್ತಿರುವ ಸಿಇಸಿ ಜ್ಞಾನೇಶ್ ಕುಮಾರ್ ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಆಗ್ರಹಿಸಿದ್ದಾರೆ. ಒಂದು ವೇಳೆ ರಾಜೀನಾಮೆ ನೀಡದಿದ್ದಲ್ಲಿ 'ಜಂತರ್ ಮಂತರ್ 2.0' ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಹೆಸರು ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ಸಿಇಸಿ ಕೈಗೊಂಡ ಏಕಪಕ್ಷೀಯ ಬದಲಾವಣೆಗಳ ವಿರುದ್ಧ ಚುನಾವಣಾ ಆಯೋಗದ ಒಳಗೆಯೇ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆಯೋಗದ ಇತರ ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ 10 ತಿಂಗಳಲ್ಲಿ ಕನಿಷ್ಠ 14 ಬಾರಿ ಈ ನಿರ್ಧಾರಗಳ ವಿರುದ್ಧ ಆಕ್ಷೇಪ ಎತ್ತಿದ್ದರು ಎಂಬುದು ಈಗ ಬಹಿರಂಗವಾಗಿದೆ.

Category
ಕರಾವಳಿ ತರಂಗಿಣಿ