image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಚುನಾವಣಾ ಆಯೋಗ ಮತ್ತು ಎಸ್​ಐಆರ್ ಪ್ರಕ್ರಿಯೆಗೆ 124 ಮಾಜಿ ಅಧಿಕಾರಿಗಳ ಬೆಂಬಲ

ಚುನಾವಣಾ ಆಯೋಗ ಮತ್ತು ಎಸ್​ಐಆರ್ ಪ್ರಕ್ರಿಯೆಗೆ 124 ಮಾಜಿ ಅಧಿಕಾರಿಗಳ ಬೆಂಬಲ

ನವದೆಹಲಿ : ಭಾರತೀಯ ಚುನಾವಣಾ ಆಯೋಗ (ECI) ಮತ್ತು ವಿಶೇ‍ಷ ಸಗಟು ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಬೆಂಬಲಿಸಿ 124 ಮಾಜಿ ಐಎಎಸ್ ಹಾಗೂ ಐಎಫ್‌ಎಸ್ ಅಧಿಕಾರಿಗಳ ಗುಂಪು ಬಹಿರಂಗ ಪತ್ರವೊಂದನ್ನು ಬಿಡುಗಡೆ ಮಾಡಿದೆ. ಚುನಾವಣಾ ವಂಚನೆ ಮತ್ತು ಮತ ಕಳ್ಳತನದ ಕುರಿತ ಆರೋಪಗಳನ್ನು ಸೂಕ್ತ ಆಧಾರ ಹಾಗೂ ಸಾಕ್ಷ್ಯಗಳೊಂದಿಗೆ ಸಾಬೀತುಪಡಿಸಬೇಕು ಎಂದು ಒತ್ತಾಯಿಸಿರುವ ನಿವೃತ್ತ ಅಧಿಕಾರಿಗಳು, ಆಧಾರರಹಿತ ಆರೋಪಗಳು ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಸಾರ್ವಜನಿಕ ನಂಬಿಕೆಯನ್ನು ಕುಸಿಯುವಂತೆ ಮಾಡುತ್ತವೆ ಎಂದು ಎಚ್ಚರಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೆಹಲಿಯಲ್ಲಿ ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿರುವ ಮತ್ತು ಮಮತಾ ಬ್ಯಾನರ್ಜಿ ಹಾಗೂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ನಾಲ್ವರು ಮಾಜಿ ಮುಖ್ಯಮಂತ್ರಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಬೆನ್ನಲ್ಲೇ ಈ ಬಹಿರಂಗ ಪತ್ರ ಹೊರಬಿದ್ದಿದೆ.

ಎಸ್​ಐಆರ್​ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಕೂಲಂಕಷವಾಗಿ ಪರಿಶೀಲಿಸಿದ್ದು, ಅಗತ್ಯ ಭದ್ರತಾ ಕ್ರಮಗಳನ್ನು ಸೂಚಿಸಿ ಚುನಾವಣಾ ಆಯೋಗದ ಅಧಿಕಾರವನ್ನು ಎತ್ತಿಹಿಡಿದಿದೆ ಎಂದು ಅಧಿಕಾರಿಗಳು ನೆನಪಿಸಿದ್ದಾರೆ. 'ಪ್ರಶ್ನಿಸುವುದು ಪ್ರತಿಯೊಬ್ಬ ನಾಗರಿಕನ ಹಕ್ಕು, ಆದರೆ ಆರೋಪ ಮಾಡಿದವರು ಅದನ್ನು ಸಾಬೀತುಪಡಿಸುವುದು ಅವರ ಕರ್ತವ್ಯ' ಎಂದು ಈ ಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ.

Category
ಕರಾವಳಿ ತರಂಗಿಣಿ