image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಬಾಲಿವುಡ್ ನಟ ಇಮ್ರಾನ್ ಖಾನ್‌ಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯಲು ನೋಟಿಸ್ ಜಾರಿ

ಬಾಲಿವುಡ್ ನಟ ಇಮ್ರಾನ್ ಖಾನ್‌ಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯಲು ನೋಟಿಸ್ ಜಾರಿ

ಮುಂಬೈ : ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ರಾಜಕೀಯ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟ ಆಮಿರ್ ಖಾನ್ ಸೋದರಳಿಯ ಹಾಗೂ ಅಮೆರಿಕ ಪ್ರಜೆ ಇಮ್ರಾನ್ ಖಾನ್‌ಗೆ ಮುಂಬೈ ಪೊಲೀಸರು ಮತ್ತು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿಯಿಂದ (FRRO) ಅಕ್ಟೋಬರ್ 28ರೊಳಗೆ ದೇಶ ತೊರೆಯುವಂತೆ ನೋಟಿಸ್ ನೀಡಲಾಗಿದೆ.

ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿದ್ದ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಇಮ್ರಾನ್ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವರು ಒವರ್‌ಸೀಸ್ ಸಿಟಿಜನ್ ಆಫ್ ಇಂಡಿಯಾ (OCI) ಕಾರ್ಡ್ ಹೊಂದಿರುವ ಅಮೆರಿಕ ಪ್ರಜೆ ಎಂಬುದು ದೃಢಪಟ್ಟಿತ್ತು. ಭಾರತೀಯ ವಲಸೆ ಕಾಯ್ದೆಯ ನಿಯಮಗಳ ಪ್ರಕಾರ ಒಸಿಐ ಕಾರ್ಡ್‌ದಾರರು ಯಾವುದೇ ದೇಶೀಯ ರಾಜಕೀಯ ಚಟುವಟಿಕೆಗಳು ಅಥವಾ ಪ್ರತಿಭಟನೆಗಳಲ್ಲಿ ಭಾಗವಹಿಸುವಂತಿಲ್ಲ. ಈ ನಿಯಮ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಈ ನೋಟಿಸ್ ಜಾರಿ ಮಾಡಲಾಗಿದ್ದು, ಇದರ ವಿರುದ್ಧ ನಟ ಕಾನೂನು ಹೋರಾಟ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Category
ಕರಾವಳಿ ತರಂಗಿಣಿ