image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ತಮಿಳುನಾಡಿನಲ್ಲಿ ಮುಂದುವರಿದ ಭಾರಿ ಮಳೆ: ಶಾಲಾ-ಕಾಲೇಜುಗಳಿಗೆ ರಜೆ

ತಮಿಳುನಾಡಿನಲ್ಲಿ ಮುಂದುವರಿದ ಭಾರಿ ಮಳೆ: ಶಾಲಾ-ಕಾಲೇಜುಗಳಿಗೆ ರಜೆ

ತಮಿಳುನಾಡು : ತಮಿಳುನಾಡಿನಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿದಿದೆ. ಮಳೆಯ ಅಬ್ಬರ ಹೆಚ್ಚಿರುವ ಹಿನ್ನೆಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತೂತುಕುಡಿ, ತಿರುನಲ್ವೇಲಿ, ಕನ್ಯಾಕುಮಾರಿ, ನೀಲಗಿರಿ ಸೇರಿದಂತೆ ವಿವಿಧೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಕ್ಟೋಬರ್ 25ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕೇರಳದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪುದುಚೇರಿ ಮತ್ತು ಕಾರೈಕಲ್‌ನಲ್ಲಿರುವ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೂ ರಜೆ ಘೋಷಿಸಲಾಗಿದ್ದು, ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಆಡಳಿತ ಯಂತ್ರ ಸಂಪೂರ್ಣ ಸನ್ನದ್ಧವಾಗಿದೆ.

Category
ಕರಾವಳಿ ತರಂಗಿಣಿ