image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪಟಾಕಿ ತಯಾರಿಕೆ ವೇಳೆ ಸಂಭವಿಸಿದ ಭಾರಿ ಸ್ಫೋಟ: ಏಳು ಸಾವು, ಹಲವರಿಗೆ ಗಾಯ

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪಟಾಕಿ ತಯಾರಿಕೆ ವೇಳೆ ಸಂಭವಿಸಿದ ಭಾರಿ ಸ್ಫೋಟ: ಏಳು ಸಾವು, ಹಲವರಿಗೆ ಗಾಯ

ಬಿಹಾರ : ಬಿಹಾರದ ಸಿವಾನ್ ಜಿಲ್ಲೆಯ ಮಹಾರಾಜ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಅಲಂಪುರ್ ಗ್ರಾಮದಲ್ಲಿ ಅಕ್ರಮವಾಗಿ ಪಟಾಕಿ ತಯಾರಿಸುತ್ತಿದ್ದ ಮನೆಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಏಳು ಜನರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಗ್ರಾಮದ ಜನವಸತಿ ಪ್ರದೇಶದ ಮನೆಯೊಂದರಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಅಕ್ರಮವಾಗಿ ಪಟಾಕಿ ತಯಾರಿಸುವ ಕೃತ್ಯ ನಡೆಯುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲಿ ದಾಸ್ತಾನು ಮಾಡಿದ್ದ ಸ್ಫೋಟಕ ಸಾಮಾಗ್ರಿಗಳು ಭಾರೀ ಶಬ್ಧದೊಂದಿಗೆ ಸಿಡಿದುಬಿದ್ದಿವೆ. ಸ್ಫೋಟದ ತೀವ್ರತೆ ಎಷ್ಟು ಪ್ರಬಲವಾಗಿತ್ತೆಂದರೆ, ಪಟಾಕಿ ತಯಾರಿಸುತ್ತಿದ್ದ ಇಡೀ ಕಟ್ಟಡ ಸಂಪೂರ್ಣವಾಗಿ ಧ್ವಂಸಗೊಂಡು ನೆಲಸಮವಾಗಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರಲ್ಲಿ ಸ್ಥಳೀಯ ನಿವಾಸಿ ಅಮಿರುದ್ದೀನ್ ಮಿಯಾನ್ ಎಂದು ಗುರುತಿಸಲಾಗಿದ್ದು, ಉಳಿದವರ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ. ಘಟನೆಯಲ್ಲಿ ಗಾಯಗೊಂಡಿರುವ ಇತರೆ ವ್ಯಕ್ತಿಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅವಶೇಷಗಳಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯುವ ಕೆಲಸ ಮುಂದುವರೆದಿದೆ. ಈ ಅಕ್ರಮ ಪಟಾಕಿ ಘಟಕದ ಕುರಿತು ಸ್ಥಳೀಯ ಆಡಳಿತದ ನಿರ್ಲಕ್ಷ್ಯವೇ ಕಾರಣವೆಂಬ ಆರೋಪಗಳು ಕೇಳಿಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಿದ್ದಾರೆ.

Category
ಕರಾವಳಿ ತರಂಗಿಣಿ