image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಸೌರವ್ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ಸೌರವ್ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ಮದ್ರಾಸ್ : ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ವಕ್ತಾರ ಸೌರವ್‌ ದಾಸ್‌ ಅವರ ಪಾಸ್‌ಪೋರ್ಟ್‌ ಹಾಗೂ ಆಧಾರ್‌ ಕಾರ್ಡ್‌ ರದ್ದುಗೊಳಿಸಿ, ಅವರ ಹಿನ್ನೆಲೆ ಮತ್ತು ಪೌರತ್ವದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೋರಿ ಮದ್ರಾಸ್‌ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಕೆಯಾಗಿದೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು ಸೌರವ್‌ ದಾಸ್‌ ಹಾಗೂ ಕೇಂದ್ರ ಸರ್ಕಾರದ ಸಂಬಂಧಿತ ಇಲಾಖೆಗಳಿಗೆ ನೋಟಿಸ್‌ ನೀಡಿದ್ದು, 6 ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.

ಸೌರವ್‌ ದಾಸ್‌ ಅವರು ನ್ಯಾಯಾಂಗದ ವಿರುದ್ಧ ಪದೇಪದೆ ಅವಹೇಳನಕಾರಿ ಹಾಗೂ ನಿಂದನಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜಿಐ) ಸೂರ್ಯಕಾಂತ್‌ ಅವರ ವಿರುದ್ಧವೂ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತಕ್ಷಣವೇ ನಿರ್ಬಂಧಿಸಬೇಕು ಹಾಗೂ ನ್ಯಾಯಾಂಗದ ವಿರುದ್ಧ ಯಾವುದೇ ರೀತಿಯ ಹೇಳಿಕೆ ನೀಡದಂತೆ ತಡೆ ನೀಡಬೇಕು ಎಂದೂ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ಅರ್ಜಿ ಆಧಾರದ ಮೇಲೆ ಹೈಕೋರ್ಟ್ ಕೇಂದ್ರ ಸರ್ಕಾರ ಹಾಗೂ ದಾಸ್‌ಗೆ ವಿವರಣೆ ಕೋರಿ ನೋಟಿಸ್ ಜಾರಿ ಮಾಡಿದೆ.

Category
ಕರಾವಳಿ ತರಂಗಿಣಿ