image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ನ. 17ಕ್ಕೆ ತೀವ್ರ ಚಂಡಮಾರುತದ ಭೀತಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ನ. 17ಕ್ಕೆ ತೀವ್ರ ಚಂಡಮಾರುತದ ಭೀತಿ

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ನವೆಂಬರ್ 17ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ರೂಪಾಂತರಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯ ಆಗ್ನೇಯ ದಿಕ್ಕಿನಲ್ಲಿ ಉಂಟಾಗಿರುವ ಈ ವಾಯುಭಾರ ಕುಸಿತವು ಭಾನುವಾರ ಮತ್ತಷ್ಟು ತೀವ್ರಗೊಂಡು ವಾಯುವ್ಯ ದಿಕ್ಕಿನತ್ತ ಚಲಿಸಲಿದೆ. ನವೆಂಬರ್ 16ರಂದು ದಕ್ಷಿಣ ಮತ್ತು ಅದಕ್ಕೆ ಹೊಂದಿಕೊಂಡಿರುವ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಾಗಿ ಮಾರ್ಪಟ್ಟು, ನವೆಂಬರ್ 17ರ ವೇಳೆಗೆ ತೀವ್ರ ಚಂಡಮಾರುತದ ಸ್ವರೂಪ ಪಡೆಯುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಚಂಡಮಾರುತದ ಪ್ರಭಾವದಿಂದ ತಮಿಳುನಾಡಿನ ಉತ್ತರ ಕರಾವಳಿ, ಪುದುಚೇರಿ ಹಾಗೂ ಕಾರೈಕಲ್ ಭಾಗಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆಯ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳ ಅವಧಿಯಲ್ಲಿ ಚೆನ್ನೈ, ಚೆಂಗಲ್‌ಪಟ್ಟು, ಕಾಂಚೀಪುರಂ ಹಾಗೂ ಕನ್ಯಾಕುಮಾರಿ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗಿದೆ.

Category
ಕರಾವಳಿ ತರಂಗಿಣಿ