image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಮುಂಗಾರು ಅಧಿವೇಶನದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ

ಮುಂಗಾರು ಅಧಿವೇಶನದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನ ನೀಡಲು ಸರ್ಕಾರ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ಸಂಸದ ರಾಹುಲ್ ಗಾಂಧಿ ಹಾಗೂ ​ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಜಂಟಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವಂತೆ ಸರ್ಕಾರಕ್ಕೆ ನಾವು ಒತ್ತಾಯಿಸುತ್ತಿದ್ದೇವೆ ಎಂದಿರುವ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಮತ್ತು ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಅನೇಕ ಬಾರಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವ ಕುರಿತು ಉಚ್ಚರಿಸಿರುವ ಕುರಿತು ಉಲ್ಲೇಖಿಸಿದ್ದಾರೆ.

ಕಳೆದ ಐದ ವರ್ಷದಿಂದ ಜಮ್ಮು ಮತ್ತು ಕಾಶ್ಮೀರದ ಜನರು ನಿರಂತರವಾಗಿ ಸಂಪೂರ್ಣ ರಾಜ್ಯ ಸ್ಥಾನಮಾನಕ್ಕೆ ಒತ್ತಾಯಿಸುತ್ತಿದೆ. ಈ ಬೇಡಿಕೆಯು ನ್ಯಾಯ ಸಮ್ಮತವಾಗಿದ್ದು, ಸಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಹಕ್ಕುಗಳಲ್ಲಿ ನೆಲೆಯಾಗಿದೆ ಎಂದಿದ್ದಾರೆ. ಇದೇ ಮೊದಲ ಬಾರಿಗೆ ಪೂರ್ಣಾಡಳಿತ ರಾಜ್ಯವೊಂದನ್ನು ಕೇಂದ್ರಾಡಳಿತ ಪ್ರದೇಶವಾಗಿ ಕೆಳಗಿಳಿಸಲಾಗಿದೆ ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ. ಪ್ರಧಾನಿ ಮೋದಿ, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವ ಕುರಿತು 2024ರ ಮೇ 19 ರಂದು ಭುವನೇಶ್ವರದಲ್ಲಿ ನಡೆದ ಸಂದರ್ಶನದಲ್ಲಿ ಹಾಗೂ 2024ರ ಸೆಪ್ಟೆಂಬರ್ 19ರಂದು ಶ್ರೀನಗರದಲ್ಲಿ ನಡೆದ ಸಮಾವೇಶದಲ್ಲಿ ಸೇರಿದಂತೆ ರಾಜ್ಯ ಸ್ಥಾನಮಾನವನ್ನು ಪುನಃ ಸ್ಥಾಪಿಸುವ ಕುರಿತು ಹೇಳಿರುವುದನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

2019ರ ಆಗಸ್ಟ್​​ನಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನದ ವಿಧಿ 370ನ್ನು ರದ್ದು ಮಾಡಿತು. ಹಾಗೇ ರಾಜ್ಯವನ್ನು ವಿಭಜಿಸಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ ಎರಡೂ ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆ ಮಾಡಿದ್ದರು. ಇದರ ಜೊತೆಗೆ ರಾಹುಲ್​ ಗಾಂಧಿ ಲಡಾಖ್​ ಅನ್ನು ಸಂವಿಧಾನದ ಆರನೇ ಶೆಡ್ಯೂಲ್​ನ ಅಡಿ ತರುವಂತೆ ಕೋರಿದ್ದಾರೆ. ಇದರು ಲಡಾಖ್​ ಜನರ ಸಾಂಸ್ಕೃತಿಕ, ಅಭಿವೃದ್ಧಿ ಮತ್ತು ರಾಜಕೀಯ ಆಕಾಂಕ್ಷೆಗಳಿಗೆ ಸಹಾಯವಾಗುತ್ತದೆ ಎಂದು ಅವರು ಹೇಳಿದ್ದಾರೆ.

Category
ಕರಾವಳಿ ತರಂಗಿಣಿ