image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಅಮೆರಿಕವು ತಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳುವಂತೆ ಮಾಡುವ ಉದ್ದೇಶದಿಂದ ಸುಂಕದ ತಂತ್ರ ಬಳಸುತ್ತಿದೆ : ಸಚಿವ ಗೊಯಲ್

ಅಮೆರಿಕವು ತಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳುವಂತೆ ಮಾಡುವ ಉದ್ದೇಶದಿಂದ ಸುಂಕದ ತಂತ್ರ ಬಳಸುತ್ತಿದೆ : ಸಚಿವ ಗೊಯಲ್

ನವದೆಹಲಿ: ಭಾರತದ ಆರ್ಥಿಕತೆಯು ವೇಗವಾಗಿ ಬೆಳವಣಿಗೆ ಕಾಣುತ್ತಿದ್ದು, ಸ್ಥಿರತೆಯನ್ನು ಕಾಪಾಡಿಕೊಂಡಿದೆ ಎಂದು ಕೇಂದ್ರ ವಾಣಿಜ್ಯ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್​ ಗೋಯಲ್​ ಸಂಸತ್​ನಲ್ಲಿ ಸಮರ್ಥಿಸಿಕೊಂಡಿದ್ದಾರೆ. ಭಾರತದ ಆರ್ಥಿಕತೆಯು ನೆಲಕಚ್ಚಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ. ಟ್ರಂಪ್​ ಹೇಳಿಕೆಯು ಭಾರಿ ಚರ್ಚೆಗೆ ಗುರಿಯಾದ ಬೆನ್ನಲ್ಲೇ ಲೋಕಸಭೆಯಲ್ಲಿ ಮಾತನಾಡಿರುವ ಅವರು, ಇದೇ ವೇಳೆ, ಕಾಂಗ್ರೆಸ್ ನಾಯಕರು ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಣಕಿಸಲು ಅಮೆರಿಕ ಅಧ್ಯಕ್ಷರ ಮಾತಿಗೆ ಕೈ ಜೋಡಿಸಿದ್ದಾರೆ ಎಂದು ಟೀಕಿಸಿದರು.

ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಭಾರತ ನಿಂತಿದ್ದು, ಶೀಘ್ರದಲ್ಲೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯ ದೇಶವಾಗಲಿದೆ. ದೇಶದ ಹಿತಾಸಕ್ತಿ ಕಾಪಾಡಲು ಭಾರತವು ಎಲ್ಲಾ ಅಗತ್ಯ ಕ್ರಮ ವಹಿಸಲಿದೆ. ಅಮೆರಿಕದ ಸುಂಕದ ಪರಿಣಾಮದ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ಪಿಯೂಷ್​ ಗೋಯಲ್ ತಿಳಿಸಿದರು. ಭಾರತವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದ್ದು, ನಮ್ಮ ಆರ್ಥಿಕ ಸುಧಾರಣೆಗಳು ರೈತರು, ಎಂಎಸ್​ಎಂಇಗಳಿಗೆ ಬೆಂಬಲ ನೀಡಿವೆ. ಈ ಸುಧಾರಣೆಗಳಿಂದಾಗಿ ನಾವು 11ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಏರಿದ್ದೇವೆ. ಇದಕ್ಕಾಗಿ ಕಳೆದೊಂದು ವರ್ಷದಿಂದ ಸರ್ಕಾರವೂ ಸಹ ಸಾಕಷ್ಟು ಪರಿವರ್ತನಾ ಕ್ರಮಗಳನ್ನು ಅನುಸರಿಸಿದೆ. ಭಾರತವೂ ಜಗತ್ತಿನ ಉತ್ಪಾದನಾ ತಾಣವಾಗಿ ಬೆಳೆಯಲು ಉತ್ತೇಜನೆ ನೀಡಲಾಗುತ್ತಿದೆ ಎಂದು ವಿವರಿಸಿದರು.

Category
ಕರಾವಳಿ ತರಂಗಿಣಿ