image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಉಪವಾಸ ಸತ್ಯಾಗ್ರಹ ಹಿಂಪಡೆದ ಸಂಸದ ಸಸಿಕಾಂತ್ ಸೆಂಥಿಲ್

ಉಪವಾಸ ಸತ್ಯಾಗ್ರಹ ಹಿಂಪಡೆದ ಸಂಸದ ಸಸಿಕಾಂತ್ ಸೆಂಥಿಲ್

ಚೆನ್ನೈ : ತಮಿಳುನಾಡಿಗೆ ಶಿಕ್ಷಣ ನಿಧಿ ಬಿಡುಗಡೆ ಮಾಡುವಂತೆ ಒತ್ತಾಯಿಸಿ ೪ ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಹಿಂಪಡೆಯುವುದಾಗಿ ತಿರುವಳ್ಳೂರು ಸಂಸದ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಒಪ್ಪಿಕೊಳ್ಳದ ಕಾರಣಕ್ಕೆ ತಮಿಳುನಾಡಿಗೆ ನೀಡಬೇಕಾದ ರಾಷ್ಟ್ರೀಯ ಶಿಕ್ಷಣ ನಿಧಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ. ಇದರಿಂದಾಗಿ ತಮಿಳುನಾಡಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಹಲವು ಮುಖ್ಯ ಕಾರ್ಯಕ್ರಮಗಳು ಸ್ಥಗಿತಗೊಂಡಿವೆ. RTE ಮೂಲಕ ಖಾಸಗಿ ಶಾಲೆಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಯೋಜನೆ ಈ ವರ್ಷ ಇನ್ನೂ ಜಾರಿಯಾಗಿಲ್ಲ. ತಮಿಳುನಾಡಿಗೆ ಶಿಕ್ಷಣ ನಿಧಿ ಬಿಡುಗಡೆಗೆ ಆಗ್ರಹಿಸಿ ತಿರುವಳ್ಳೂರು ಸಂಸದ ಸಸಿಕಾಂತ್ ಸೆಂಥಿಲ್ ೪ ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಅವರ ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಸಹ ತಮ್ಮ ಹೋರಾಟವನ್ನು ಮುಂದುವರೆಸಿದ್ದರು. ವೈದ್ಯರು ಸಂಸದರ ಆರೋಗ್ಯ ಹದಗೆಡುತ್ತಿದೆ ಎಂದು ಎಚ್ಚರಿಸಿದ್ದರು.

Category
ಕರಾವಳಿ ತರಂಗಿಣಿ