image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ : ಹಮಾಸ್‌ಗೆ ಕರೆ ನೀಡಿದ ಪ್ಯಾಲೆಸ್ಟೀನ್ ಅಧ್ಯಕ್ಷ

ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ : ಹಮಾಸ್‌ಗೆ ಕರೆ ನೀಡಿದ ಪ್ಯಾಲೆಸ್ಟೀನ್ ಅಧ್ಯಕ್ಷ

ಜೆರುಸಲೇಂ: ಶಸ್ತ್ರಾಸ್ತ್ರಗಳನ್ನು ಒಪ್ಪಿಸುವಂತೆ ಹಮಾಸ್‌ ಬಂಡುಕೋರರಿಗೆ ಪ್ಯಾಲೆಸ್ಟೀನ್‌ ಪ್ರಾಧಿಕಾರದ ಅಧ್ಯಕ್ಷ ಮಹಮೂದ್‌ ಅಬ್ಬಾಸ್‌ ಕರೆ ನೀಡಿದ್ದಾರೆ ಎಂದು ವರದಿಯಾಗಿದೆ. 'ಗಾಜಾ ಆಡಳಿತದಲ್ಲಿ ಹಮಾಸ್‌ ಬಂಡುಕೋರರು ಯಾವುದೇ ಪಾತ್ರವನ್ನು ಹೊಂದಿರುವುದಿಲ್ಲ. ಹಾಗಾಗಿ ಹಮಾಸ್ ಮತ್ತು ಇತರ ಬಣಗಳು ತಮ್ಮ ಬಳಿ ಇರುವ ಶಸ್ತ್ರಾಸ್ತ್ರಗಳನ್ನು ಕೂಡಲೇ ಹಿಂದಿರುಗಿಸಬೇಕು' ಎಂದು ಅಬ್ಬಾಸ್‌ ಹೇಳಿದ್ದಾರೆ. 

ಅಮೆರಿಕದ ತೀವ್ರ ವಿರೋಧದ ಮಧ್ಯೆಯೂ ಬ್ರಿಟನ್‌ ಸರ್ಕಾರವು ಪ್ಯಾಲೆಸ್ಟೀನ್‌ಗೆ ದೇಶದ ಮಾನ್ಯತೆ ನೀಡಲು ಮುಂದಾಗಿದೆ. ಗಾಜಾದಲ್ಲಿ ನಡೆಸುತ್ತಿರುವ ಯುದ್ಧ ಸಂಬಂಧ ಇಸ್ರೇಲ್‌ಗೆ ಬ್ರಿಟನ್‌ ಸರ್ಕಾರವು ಕೆಲವು ನಿಬಂಧನೆಗಳನ್ನು ಹಾಕಿತ್ತು. ಇದನ್ನು ಪಾಲಿಸಿಲ್ಲ ಎನ್ನುವ ಕಾರಣಕ್ಕೆ ಈ ನಿರ್ಧಾರಕ್ಕೆ ಬ್ರಿಟನ್‌ ಮುಂದಾಗಿದೆ. ವಿಶ್ವಸಂಸ್ಥೆಯ 80ನೇ ಸಾಮಾನ್ಯ ಸಭೆ ಆರಂಭವಾಗಿದೆ. ಗಾಜಾದಲ್ಲಿ ನಡೆಯುತ್ತಿರುವ ಯುದ್ಧ, ಪ್ಯಾಲೆಸ್ಟೀನ್‌ಗೆ ದೇಶದ ಮಾನ್ಯತೆ ನೀಡುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಬ್ರಿಟನ್‌, ಫ್ರಾನ್ಸ್‌, ಕೆನಡಾ, ಆಸ್ಟ್ರೇಲಿಯಾ, ಪೋರ್ಚುಗಲ್‌ ಸೇರಿದಂತೆ ಸುಮಾರು 140 ದೇಶಗಳು ಪ್ಯಾಲೆಸ್ಟೀನ್‌ ಅನ್ನು ಪ್ರತ್ಯೇಕ ದೇಶವನ್ನಾಗಿ ‍ಪರಿಗಣಿಸಲು ಮುಂದಾಗಿವೆ.

Category
ಕರಾವಳಿ ತರಂಗಿಣಿ